ವೀರಾಜಪೇಟೆ, ನ. ೨೭: ಲಯನ್ಸ್ ಕ್ಲಬ್ ವೀರಾಜಪೇಟೆ, ನಾರಾಯಣ ಆಸ್ಪತ್ರೆ ಮೈಸೂರು ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ಬಳಿಯ ಬಿಟ್ಟಂಗಾಲದಲ್ಲಿರುವ ಕ್ರೆಡೋ-ನಾರಾಯಣ ಎಮರ್ಜೆನ್ಸಿ ಕೇರ್ ಸಭಾಂಗಣದಲ್ಲಿ ತಾ.೩೦ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೩ ಗಂಟೆವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಕಾರ್ಯದರ್ಶಿ ಪೌಲ್ ಕ್ಷೇವಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.