ಮಡಿಕೇರಿ, ನ.೨೭: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಫೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಪೊನ್ನಂಪೇಟೆ ಕೂರ್ಗ್ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ಖಚಿisiಟಿg ಚಿಟಿಜ ಂಛಿಛಿeಟeಡಿಚಿಣiಟಿg ಒSಒಇ Peಡಿಜಿoಡಿmಚಿಟಿಛಿe (ಖಂಒP) ರಡಿ Iಟಿಛಿubಚಿಣioಟಿ ಯೋಜನೆ ಕುರಿತು ಮಂಗಳವಾರ ಅಂತಿಮ ವರ್ಷದ ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‌ಓ ಎಂಎಸ್‌ಎAಇ ನಿವೃತ್ತ ಉಪ ನಿರ್ದೇಶಕರಾದ ಗೋಪಿನಾಥ್ ರಾವ್ ಆರ್. ಅವರು ಅಂತಿಮ ವರ್ಷದ ಎಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು.
ಕಾರ್ಯಕ್ರಮವನ್ನು ಪೊನ್ನಂಪೇಟೆ ಕೂರ್ಗ್ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಅಧ್ಯಕ್ಷರಾದ ಡಾ.ಎಂ.ಸಿ. ಕಾರ್ಯಪ್ಪ, ಅವರು ಉದ್ಘಾಟಿಸಿದರು. ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಹನುಮಂತರಾಯ ಕೆ. ವಹಿಸಿದ್ದರು.
ಮುಖ್ಯ ಅಥಿತಿಗಳಾಗಿ ಪೊನ್ನಂಪೇಟೆ ಕೂರ್ಗ್ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಾಚಾರ್ಯರಾದ ಡಾ.ಎಂ.ಬಸವರಾಜ್ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ಸಿ.ಎನ್. ರಘು ಉಪಸ್ಥಿತರಿದ್ದರು.