ಚೆಯ್ಯAಡಾಣೆ, ನ. ೨೭: ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ಕರಡ ವತಿಯಿಂದ ತೃತೀಯ ವರ್ಷದ ಕಡಿಯತ್‌ನಾಡ್ ಕಪ್ ಹಾಕಿ ಪಂದ್ಯಾಟ ತಾ.೨೮ರಿಂದ (ಇಂದಿನಿAದ) ಆರಂಭಗೊಳ್ಳಲಿದೆ.

ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸಂಸದ ಯದುವೀರ್ ಒಡೆಯರ್ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಪಾಲ್ಗೊಳ್ಳಲಿದ್ದಾರೆ.

ಅತಿಥಿಗಳಾಗಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಅಭಿವೃದ್ಧಿ ಅಧಿಕಾರಿ ಸೆಬಾಸ್ಟಿನ್ ಪೆರೇರಾ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ ಅಪ್ಪಚ್ಚು ಭಾಗವಹಿಸಲಿದ್ದಾರೆ.

ತಾ.೨೯ರಂದು ಸೆಮಿಫೈನಲ್ ಪಂದ್ಯಾಟಕ್ಕೆ ಮುಖ್ಯ ಅತಿಥಿಗಳಾಗಿ ಬಿದ್ದೇರಿಯಂಡ ಕಾವೇರಪ್ಪ, ಪಟ್ರಪಂಡ ಜಗದೀಶ್ ಹಾಗೂ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಭಾಗವಹಿಸಲಿದ್ದಾರೆ.

ತಾ.೩೦ರಂದು ಫೈನಲ್ ಪಂದ್ಯಾಟ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

ಸಮಾರೋಪ ಸಮಾರಂಭದ ಅಧ್ಯಕ್ಷತೆ ಯನ್ನು ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಬೇಪಡಿಯಂಡ ಎಸ್. ಬಿದ್ದಪ್ಪ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಅಂತರರಾಷ್ಟಿçÃಯ ಹಾಕಿ ತೀರ್ಪುಗಾರರಾದ ಅಚ್ಚಕಾಳೆರ ಪಳಂಗಪ್ಪ, ಕೊಡವ ಕಲ್ಚರಲ್ ಮತ್ತು ರಿಕ್ರಿಯೇಷನ್ ಕ್ಲಬ್ ಕ್ರೀಡಾ ಸಮಿತಿಯ ಅಧ್ಯಕ್ಷ ಮೇದುರ ಗಣು ಕುಶಾಲಪ್ಪ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಬೋಪಣ್ಣ, ನೆರಪಂಡ ಸತೀಶ, ಮುಕ್ಕಾಟಿರ ಕಿರಣ್ ಇತರರು ಭಾಗವಹಿಸಲಿದ್ದಾರೆ.