ನಾಪೋಕ್ಲು, ಡಿ. ೩: ಕಾಫಿ ಬೆಳೆಗಾರರು ಕಾಫಿ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆ ಗುಣಮಟ್ಟವನ್ನು ವೃದ್ಧಿಸಬೇಕು. ಆಗ ಬೆಳೆಗಾರರು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಕಾಫಿ ರಾಷ್ಟಿçÃಯ ಪಾನೀಯ ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ ಹೇಳಿದರು.

ಭಾರತೀಯ ಕಿಸಾನ್ ಸಂಘದ ವತಿಯಿಂದ ನಾಪೋಕ್ಲು ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ ಅಧ್ಯಕ್ಷತೆಯಲ್ಲಿ ಕೊಡವ ಸಮಾಜದ ಹರದಾಸ ಅಪ್ಪನರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ನಡೆದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಸಾಧಕ-ಬಾಧಕ ಹಾಗೂ ಪರಿಹಾರಕ್ಕೆ ಸಂಬAಧಿಸಿದ ಕಾಫಿ ಬೆಳೆಗಾರರ ಸಭೆಯಲ್ಲಿ ಪಾಲ್ಗೊಂಡ ಅವರು ಮಾತನಾಡಿದರು.

ದೇಶದಲ್ಲಿ ಕಾಫಿಯ ಆಂತರಿಕ ಬಳಕೆ ಹೆಚ್ಚಬೇಕು. ಕಾಫಿ ರಾಷ್ಟಿçÃಯ ಪಾನೀಯ ಆಗಬೇಕು. ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸಚಿವರು ಚಿಕ್ಕಮಗಳೂರಿನ ಬಾಳೆಹೊನ್ನೂರಿಗೆ ಆಗಮಿಸಲಿದ್ದು, ಈ ಸಂದರ್ಭ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಲಾಗುವುದು ಎಂದರು.

ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗಬೇಕು. ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯಬೇಕಾದರು ಸಂಘಟನೆಯಿAದ ಮಾತ್ರ ಸಾಧ್ಯ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ನಾಪೋಕ್ಲು ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ ಮಾತನಾಡಿ, ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಕೊಡಗು ಬೆಳೆಗಾರರ ಒಕ್ಕೂಟ ಏಳು ವರ್ಷಗಳ ಕಾಲ ಹೋರಾಟ ಮಾಡಿದೆ. ಸಂಘಟನೆ ಪ್ರಬಲವಾದಾಗ ಸಮಸ್ಯೆಗಳ ಪರಿಹಾರ ಸಾಧ್ಯ. ಕಾಫಿ ಬೆಳೆಗಾರರು ಸಾಧಕ ಬಾಧಕಗಳ ಬಗ್ಗೆ ರಾಷ್ಟಿçÃಯ ಮಟ್ಟದಲ್ಲಿ ಚರ್ಚಿಸುವ ಅಗತ್ಯವಿದೆ ಎಂದು ತಿಳಿಸಿದರು.

ಭಾರತೀಯ ಕಾಫಿ ಮಂಡಳಿ ಸದಸ್ಯ ತಳೂರು ಕಿಶೋರ್ ಕುಮಾರ್, ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಪ್ರವೀಣ್, ಮುಂಡAಡ ನಾಣಯ್ಯ, ಮನು ಮುತ್ತಪ್ಪ ತಮ್ಮ ಅಭಿಪ್ರಾಯ ಹಂಚಿಕೊAಡರು.

ಬೆಳೆಗಾರರಾದ ಪಾಂಡAಡ ನರೇಶ್, ಕೊಂಡೀರ ಗಣೇಶ್, ಎನ್.ಎಸ್. ಉದಯಶಂಕರ್ , ಹರೀಶ್ ಪೂವಯ್ಯ, ಮತ್ತಿತರರು ಹಾಜರಿದ್ದರು. ಶಿವಚಾಳಿಯಂಡ ಜಗದೀಶ್ ಸ್ವಾಗತಿಸಿ, ವಂದಿಸಿದರು.