ಸೋಮವಾರಪೇಟೆ, ಡಿ. ೫: ತಾಲೂಕಿನ ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.

ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಧರ್ಮಪ್ಪ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಇದರೊಂದಿಗೆ ಕಲೆಗೆ ಪ್ರೋತ್ಸಾಹ ಲಭಿಸುತ್ತದೆ. ಈ ಹಿನ್ನೆಲೆ ಪ್ರತಿಭಾ ಕಾರಂಜಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದರು.

ಹAಡ್ಲಿ ಕ್ಲಸ್ಟರ್‌ನ ಸಿ.ಆರ್.ಪಿ. ಗಿರೀಶ್ ಮಾತನಾಡಿ, ಶಾಲಾ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಗೆ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಬೇಕು. ಮಕ್ಕಳ ಪ್ರತಿಭೆ, ಸಾಮರ್ಥ್ಯಕ್ಕೆ ತಕ್ಕಂತೆ ಅವಕಾಶಗಳನ್ನು ಕಲ್ಪಿಸಬೇಕೆಂದು ಕರೆ ನೀಡಿದರು.

ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಧಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಪಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಪತ್ತಿನ ಸಹಹಾರ ಸಂಘದ ಅಧ್ಯಕ್ಷ ಚಿದಾನಂದ, ಉಪಾಧ್ಯಕ್ಷ ಯಶವಂತ, ಹಂಡ್ಲಿ ಗ್ರಾಮ ಪಂಚಾಯಿತಿ ಸದಸ್ಯ ವೀರೇಂದ್ರ ಕುಮಾರ್ ಇದ್ದರು. ನಿಕಟಪೂರ್ವ ಸಿಆರ್‌ಪಿ ಸಿ.ಕೆ. ದಿನೇಶ್, ಹಂಡ್ಲಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಬಿಂದಮ್ಮ ಅವರುಗಳನ್ನು ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆದವು.