ನಾಪೋಕ್ಲು, ಡಿ. ೫ : ಕಾವೇರಿ ಮನೆ ಕುಟುಂಬಸ್ಥರಿAದ ಹುತ್ತರಿ ಕಪ್ ಕ್ರೀಡಾಕೂಟವನ್ನು ತಾ. ೧೪ ರಂದು ಬೆಳಿಗ್ಗೆ ಅಯ್ಯಂಗೇರಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ.
ಹುತ್ತರಿ ಕಪ್ ಕ್ರೀಡೆ ಅಂಗವಾಗಿ ರಾಜ್ಯಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಹಾಗೂ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ರಾಜ್ಯಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ ಉದ್ಘಾಟಿಸಲಿದ್ದಾರೆ.
ಪಾಯಿಂಟ್ ೨೨ ರೈಫಲ್ ಸ್ಪರ್ಧಾ ವಿಜೇತರಿಗೆ ಪ್ರಥಮ ಬಹುಮಾನ ಹತ್ತು ಸಾವಿರ ರೂ. ಮತ್ತು ಟ್ರೋಫಿ ದ್ವಿತೀಯ ಬಹುಮಾನ ರೂ. ೭೦೦೦ ಮತ್ತು ಟ್ರೋಫಿ ಹಾಗೂ ತೃತೀಯ ಬಹುಮಾನ ರೂ. ೫,೦೦೦ ನಗದು ಹಾಗೂ ಟ್ರೋಫಿ ವಿತರಿಸಲಾಗುವುದು.
ಏರ್ ಗನ್ ವಿಭಾಗದಲ್ಲಿ ಪ್ರಥಮ ಬಹುಮಾನ ರೂ. ೫೦೦೦ ಮತ್ತು ಟ್ರೋಫಿ ದ್ವಿತೀಯ ಬಹುಮಾನ ರೂ. ೩೦೦೦ ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ ರೂ. ೨೦೦೦ ನಗದು ಹಾಗೂ ಟ್ರೋಫಿ ವಿತರಿಸಲಾಗುವುದು. ೧೨ ರೈಫಲ್ (ಬೋರ್) ವಿಭಾಗದಲ್ಲಿ ಪ್ರಥಮ ಬಹುಮಾನ ರೂ. ೧೦,೦೦೦ ಮತ್ತು ಟ್ರೋಫಿ ದ್ವಿತೀಯ ಬಹುಮಾನ ರೂ. ೭,೦೦೦ ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ ರೂ. ೫,೦೦೦ ನಗದು ಹಾಗೂ ಟ್ರೋಫಿ ವಿತರಿಸಲಾಗುವುದು.
ಸಾರ್ವಜನಿಕರಿಗಾಗಿ ಆಯೋಜಿಸಲಾಗಿರುವ ಮುಕ್ತ ಮ್ಯಾರಥಾನ್ ಸ್ಪರ್ಧೆಯನ್ನು ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ಉದ್ಘಾಟಿಸಲಿದ್ದಾರೆ.
ಅಂದು ಬೆಳಿಗ್ಗೆ ೭.೩೦ ಗಂಟೆಗೆ ಸಾರ್ವಜನಿಕರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಅಯ್ಯಂಗೇರಿ ಶಾಲಾ ಮೈದಾನದವರೆಗೆ ೮ ಕಿ. ಮೀ ಅಂತರ ಹಾಗೂ ೧೫ ವರ್ಷದ ಒಳಗಿನ ಮಕ್ಕಳಿಗೆ ೫ ಕಿ. ಮೀ.ಅಂತರದ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. ಭರತ್ ೮೪೩೧೫೧೫೪೦೪ ಸಂಪರ್ಕಿಸಬಹುದಾಗಿದೆ.