ನಾಪೋಕ್ಲು, ಡಿ. ೫: ಕೊಡಗಿನ ಕ್ರೀಡಾಪಟುಗಳು ರಾಜ್ಯಮಟ್ಟದ ೪೫ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಟ್ರನ್ಸ್ ಅಥ್ಲೆಟಿಕ್‌ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ರಾಜ್ಯಮಟ್ಟದ ೪೫ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಬಳ್ಳಾರಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಪಾಲ್ಗೊಂಡು ಅತ್ಯುತ್ತಮ ಸಾಧನೆಯೊಂದಿಗೆ ಬಹುತೇಕ ಪದಕಗಳನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ನಾAಗಾಲ - ಬಿಟ್ಟಂಗಾಲ ಗ್ರಾಮದ ಚೇಮಿರ ಸೀತಮ್ಮ ಪ್ರೇಮ ಭಾರದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು, ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನವನ್ನು, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು, ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ ಮನು ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

ಟಿ. ಶೆಟ್ಟಿಗೇರಿಯ ಪೆಮ್ಮಂಡ ಸಬಿತ ಕುಶಾಲಪ್ಪ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಐಮುಡಿಯಂಡ ಶೈಲಾ ಕುಶಾಲನಗರ ಅವರು ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ೧೫೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪಟ್ಟಚೆರುವಂಡ ಗಗನ್ ಮೇದಪ್ಪ (ಜಿಮ್ಮ) ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ, ೧೦೦ ಮೀಟರ್ ಹರ್ಡಲ್ಸ್ ರನ್ನಿಂಗ್‌ನಲ್ಲಿ ಪ್ರಥಮ ಸ್ಥಾನ, ತಟ್ಟೆ ಎಸೆತದಲ್ಲಿ ಪ್ರಥಮ ಗಳಿಸಿದ್ದಾರೆ.

ಮುಳ್ಳೆರ ಪೊನ್ನಮ್ಮ ಜಾವೆಲಿನ್ ಎಸೆತದಲ್ಲಿ ಪ್ರಥಮ ಪ್ರಥಮ ಸ್ಥಾನ, ಭಾರದ ಗುಂಡ ಎಸೆತದಲ್ಲಿ ಪ್ರಥಮ ಸ್ಥಾನ, ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ತಟ್ಟೆ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.