ಮಡಿಕೇರಿ, ಡಿ. ೬: ಕೊಡಗು ಜಿಲ್ಲೆಯಲ್ಲಿ ತಾ.೭ ರಂದು (ಇಂದು) ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಯಾವುದೇ ಅಹಿತಕರ ಘಟನೆಗಳು ಹಾಗೂ ಅವ್ಯಹಾರ ನಡೆಯದಂತೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಪ್ರೌಢಶಾಲೆ, ನಗರದ ಸರ್ಕಾರಿ ಪ್ರಥಮ ದರ್ಜೆ, ಸಂತ ಮೈಕಲರ ಕಾಲೇಜು, ಸಂತ ಮೈಕಲರ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ಪರೀಕ್ಷೆಯನ್ನು ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ರ ಕಲಂ ೧೬೩ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್ಗಳನ್ನು ಮುಚ್ಚುವಂತೆ ತಿಳಿಸಿದೆ. ಈ ಆದೇಶವು ಪರೀಕ್ಷಾ ದಿನದಂದು ಬೆಳಗ್ಗೆ ೯ ಗಂಟೆಯಿAದ ಸಂಜೆ ೫.೩೦ ಗಂಟೆವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ತಿಳಿಸಿದ್ದಾರೆ.