ಮಡಿಕೇರಿ, ಡಿ. ೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯರ ಕವಿಗೋಷ್ಠಿಯನ್ನು ತಾ.೯ರಂದು ಮಧ್ಯಾಹ್ನ ೨.೩೦ಕ್ಕೆ ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದೆ.

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿಗಳಾದ ಬಿ.ಎ ಶಂಷುದ್ದೀನ್ ಅವರು ವಹಿಸಲಿದ್ದು, ಕವಿಗೋಷ್ಠಿಯನ್ನು ಕವಿ ಸಾಹಿತಿ, ಕಾಜೂರು ಸತೀಶ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಸಾಹಿತಿ ಕೃಪಾ ದೇವರಾಜ್ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ.

ಹಿರಿಯ ಕವಿಗಳಾದ ಕಿಗ್ಗಾಲು ಎಸ್ ಗಿರೀಶ್, ಜಲ ಕಾಳಪ್ಪ, ಮೂಟೆರ ಕೆ. ಗೋಪಾಲಕೃಷ್ಣ, ಕೆ. ಶೋಭಾ ರಕ್ಷಿತ್, ಕಟ್ರತನ ಲಲಿತಾ ಅಯ್ಯಣ್ಣ, ಶ.ಗ. ನಯನತಾರ, ಅಂಬೆಕಲ್ಲು ಸುಶೀಲ ಕುಶಾಲಪ್ಪ, ಬಿ.ಜಿ ಅನಂತಶಯನ, ವಿದ್ವಾನ್ ಶಂಕರಯ್ಯ ಮಾಸ್ಟರ್, ಭಾಗೀರಥಿ ಹುಳಿತಾಳ, ರೇವತಿ ರಮೇಶ್, ಬಿ.ಬಿ. ನಾಗರಾಜ ಆಚಾರ್, ಕೆ.ಎಸ್. ನಳಿನಿ ಸತ್ಯನಾರಾಯಣ, ಶಿವದೇವಿ ಅವನೀಶ್ಚಂದ್ರ, ಹೆಚ್.ಹೆಚ್. ಸುಂದರ, ಹರೀಶ್ ಸರಳಾಯ, ಹಾ.ತಿ. ಜಯಪ್ರಕಾಶ್ ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.