ಮಡಿಕೇರಿ, ಡಿ. ೬: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಟಿಇಟಿ)ಯನ್ನು ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ನಿಯಮಾನುಸಾರ ನಡೆಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಸಿದ್ಧತೆ ಸಂಬAಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಟಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಗೊಂದಲಗಳಿಗೆ ಅವಕಾಶ ಮಾಡದೆ, ಸುಸೂತ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಇರಬೇಕು. ಯಾವುದೇ ರೀತಿ ಲೋಪ ಉಂಟಾಗದAತೆ ಎಚ್ಚರವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಗಾಳಿ, ಬೆಳಕು, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತಿತರ ಕನಿಷ್ಟ ಸೌಲಭ್ಯ ಇರಬೇಕು ಎಂದು ಸಲಹೆ ನೀಡಿದರು. ಟಿಇಟಿ ಪರೀಕ್ಷೆಗೆ ನಿಯೋಜಿಸಿರುವ ಮೇಲ್ವಿಚಾರಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಎಲ್ಲರೂ ತಮ್ಮ ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕು. ಕಳೆದ ಬಾರಿಯಂತೆ ಈ ಬಾರಿಯು ಸಹ ವೆಬ್‌ಕಾಸ್ಟಿಂಗ್‌ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲೆಯಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ತಾ. ೭ ರಂದು (ಇಂದು) ನಡೆಯಲಿದ್ದು, ಬೆಳಿಗ್ಗೆ ಮೊದಲ ಅಧಿವೇಶನ ೯.೩೦ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಗೆ ಹಾಗೂ ಎರಡನೇ ಅಧಿವೇಶನವು ೨ ರಿಂದ ಆರಂಭವಾಗಿ ೪.೩೦ ಗಂಟೆವರೆಗೆ ನಡೆಯಲಿದ್ದು, ಬೆಳಿಗ್ಗೆ ನಡೆಯುವ ಪರೀಕ್ಷೆಯಲ್ಲಿ ೬೮೩ ಮತ್ತು ಮಧ್ಯಾಹ್ನ ನಡೆಯುವ ಪರೀಕ್ಷೆಯಲ್ಲಿ ೧,೩೦೩ ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪದವಿಪೂರ್ವ ಪ್ರೌಢಶಾಲೆ, ನಗರದ ಸರ್ಕಾರಿ ಪ್ರಥಮ ದರ್ಜೆ, ಸಂತ ಮೈಕಲರ ಕಾಲೇಜು, ಸಂತ ಮೈಕಲರ ಪದವಿಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.
ಟಿಇಟಿ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಪರೀಕ್ಷೆಯನ್ನು ಸುಗಮವಾಗಿ, ಸುಲಲಿತವಾಗಿ ನಡೆಸಲು ಮತ್ತಿತರ ಸಂದರ್ಭದಲ್ಲಿ ಅಗತ್ಯ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪರೀಕ್ಷಾ ನೋಡಲ್ ಅಧಿಕಾರಿ ಬಿಂಧು ಅವರು ಟಿಇಟಿ ಪರೀಕ್ಷೆ ಮಾರ್ಗಸೂಚಿ ಬಗ್ಗೆ ವಿವರಿಸಿದರು. ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ, ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಆರ್. ಮಹೇಶ್, ಶಶಿಕಲಾ, ಸಂತ ಮೈಕಲರ ಪ್ರೌಢ ಶಾಲೆಯ ಜಫೀರ್ ಇತರರು ಇದ್ದರು.