ಗೋಣಿಕೊಪ್ಪಲು. ಡಿ. ೭: ಮಾಯಾಮುಡಿಯ ರಿಮ್ ಫೈರ್ ಶೂಟರ್ಸ್ ಹಾಗೂ ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟ ಸಂಯುಕ್ತ ಆಶ್ರಯದಲ್ಲಿ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ತೋಕ್ ನಮ್ಮೆ ೨೦೨೫ ನಡೆಯಿತು.

ಮಾಯಮುಡಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆ ಸೇರಿದಂತೆ ಹೊರಜಿಲ್ಲೆಗಳಿಂದ ಸ್ಪರ್ಧಿಗಳು ಪಾಲ್ಗೊಂಡಿದ್ದರು.

ಜ್ಯೋತಿ ಬೆಳಗಿಸಿ, ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಮಾತನಾಡಿ , ತೋಕ್ ಕೊಡವ ಸಂಸ್ಕೃತಿಯ ಪ್ರತೀಕ, ಪೂಜನೀಯ ಸ್ಥಾನವನ್ನು ತೋಕ್‌ಗೆ ನೀಡಲಾಗುತ್ತಿದೆ. ಇತ್ತೀಚೆಗೆ ತೋಕ್ ನಮ್ಮೆ ಎಲ್ಲೆಡೆ ನಡೆಯುತ್ತಿದೆ. ರಾಷ್ಟç ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಶೂಟಿಂಗ್ ವಿಭಾಗದಲ್ಲಿ ಪಾಲ್ಗೊಳ್ಳುವಿಕೆ ಸಾಧ್ಯವಾಗುತ್ತಿಲ್ಲ. ಇಂತಹ ಶೂಟಿಂಗ್ ಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ರೂಪಿಸುವ ಕೆಲಸ ಮಾಡಲಾಗುತ್ತದೆ ಎಂದರು.

ಕೊಡಗಿನ ಕೊಡವರು ಕೋವಿಗೆ ಹೆಚ್ಚಿನ ಗೌರವ ನೀಡುತ್ತಲೆ ಬರುತ್ತಿದ್ದಾರೆ, ಆದರೆ ಇತ್ತೀಚಿನ ದಿನಗಳಲ್ಲಿ ಕೋವಿ ದುರುಪಯೋಗ ಕಳವಳಕಾರಿ ಸಂಗತಿಯಾಗಿದೆ. ಕೋವಿಯನ್ನು ನಮ್ಮ ಸಂಸ್ಕೃತಿಯ ಭಾಗವಾಗಿ ಪೂಜಿಸಿ ಗೌರವಿಸಿ ಎಂದು ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೊಟ್ಟಂಗಡ ವಿಜು ದೇವಯ್ಯ ಕಿವಿಮಾತು ಹೇಳಿದರು.

ತೋಕ್ ನಮ್ಮೆಯ ಸಂಚಾಲಕ ಸಣ್ಣವಂಡ ವಿನಯ್ ಅಯ್ಯಪ್ಪ ಮುಂದಾಳತ್ವದಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ತೀತಿರ ಉತ್ತಪ್ಪ, ಯುವ ಉದ್ಯಮಿ ಕಾಳಪಂಡ ಜೆ. ಬೋಪಣ್ಣ, ಆರ್‌ಎಂಸಿ ಮಾಜಿ ಅಧ್ಯಕ್ಷ ಕಾಳಪಂಡ ಟಿಪ್ಪು ಬಿದ್ದಪ್ಪ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

ಸ್ಪರ್ಧೆಯು .೨೨ ರೈಫಲ್ ಮತ್ತು ೧೨ನೇ ಬೋರ್ ಕೋವಿಯ ಪ್ರತ್ಯೇಕ ಎರಡು ವಿಭಾಗಗಳಲ್ಲಿ ನಡೆಯಿತು. ಪೂದ್ರಿಮಾಡ ಸರಿತ ತಮ್ಮಯ್ಯ, ಪ್ರಾರ್ಥಿಸಿ, ಗ್ರಾ.ಪಂ.ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ ಸ್ವಾಗತಿಸಿ, ವಂದಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನದ ವಿಶೇಷ ಪಾರಿತೋಷಕ, ಸೇರಿದಂತೆ, ಆಕರ್ಷಕ ನಗದು ಬಹುಮಾನವನ್ನು ನೀಡಲಾಯಿತು.

ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟಿರ ಟಾಟು ಮೊಣ್ಣಪ್ಪ, ಮಾಯಮುಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆಪಟ್ಟಿರ ಬೋಪಣ್ಣ, ಸದಸ್ಯರಾದ ಮಲ್ಲೇಂಗಡ ಮಮತಾ ಪೂಣಚ್ಚ, ಮಾಯಮುಡಿಯ ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಸುಧೀರ್, ಕಾಫಿ ಬೆಳೆಗಾರರಾದ ಸಣ್ಣುವಂಡ ಸರೋಜ, ಆಪಟ್ಟಿರ ಸೋಮಯ್ಯ, ಗೋಣಿಕೊಪ್ಪಲಿನ ಟಾಟಾ ಮೋಟರ್ಸ್ನ ವ್ಯವಸ್ಥಾಪಕ ಪುಳ್ಳಂಗಡ ಸಿಮ್ ಕುಟ್ಟಪ್ಪ, ವ್ಯವಸ್ಥಾಪಕ ಬೋಪಣ್ಣ, ಉದ್ಯಮಿಗಳಾದ ತಾತಂಡ ಸೋಮಯ್ಯ, ಮಧು ಮಂದಪ್ಪ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.