ಗುಡ್ಡೆಹೊಸೂರು, ಡಿ. ೮: ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಂಜರಾಯಪಟ್ಟಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕ್ಲಸ್ಟರ್ ಮಟ್ಟದ ಒಟ್ಟು ೨೧ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸರಕಾರಿ ಮತ್ತು ಖಾಸಗಿ ಶಾಲೆಯ ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಎಸ್.ಡಿ ಎಂ.ಸಿ ಯ ಅಧ್ಯಕ್ಷರಾದ ನಾಗೇಂದ್ರ ಅವರು ಕಾರ್ಯಕ್ರಮ ಉಧ್ಘಾಟಿಸಿದರು. ಈ ಸಂದರ್ಭ ವಿವಿಧ ಶಾಲೆಗಳ ಮುಖ್ಯಶಿಕ್ಷಕರು ಹಾಜರಿದ್ದರು. ಗುಡ್ಡೆಹೊಸೂರು ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಎಸ್. ಭಾಗ್ಯ ಸ್ವಾಗತಿಸಿದರು, ಶಿಕ್ಷಕಿ ಯಶುಮತಿ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ವೈಶಾಲಿ ವಂದಿಸಿದರು.