ಮಡಿಕೇರಿ, ಡಿ. ೮: ನಗರದ ಅಂಬೇಡ್ಕರ್ ಭವನ ಸಮಿತಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಭವನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ಮರಿಸಲಾಯಿತು.

ಈ ಸಂದರ್ಭ ಮಾತನಾಡಿದ ಭವನ ಸಮಿತಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ಅಂಬೇಡ್ಕರ್ ತತ್ವ, ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ಅವರ ಹೆಸರಿಗೆ ಚ್ಯುತಿ ಬಾರದಂತೆ ಸಮಾಜದಲ್ಲಿ ಬಾಳ್ವೆ ನಡೆಸಬೇಕು. ಅವರ ಚಿಂತನೆಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ವೈದ್ಯರಾದ ಸತೀಶ್ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಅಂಬೇಡ್ಕರ್ ಅವರ ಪಾತ್ರ ಮಹತ್ತರವಾಗಿದೆ. ನಾವೆಲ್ಲ ಸಂವಿಧಾನ ಆಶಯಗಳಡಿ ಮುಂದುವರೆಯಬೇಕು. ಸಂಘಟಿತರಾಗುವ ಮೂಲಕ ಮುಖ್ಯವಾಹಿನಿಗೆ ಬರುವಂತಾಗಬೇಕೆAದರು. ನಗರಸಭೆ ಸದಸ್ಯೆ ಶಾರದಾ ನಾಗರಾಜು, ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯ ಹೀರ ಸುಬ್ಬಯ್ಯ, ಭವನ ಸಮಿತಿಯ ಉಪಾಧ್ಯಕ್ಷ ಹೆಚ್.ಆರ್. ಮುತ್ತಪ್ಪ ಪ್ರಮುಖರಾದ ಲತಾ ಮುತ್ತಪ್ಪ, ರಘು, ಭೋಜ ಸೇರಿದಂತೆ ಇನ್ನಿತರರು ಹಾಜರಿದ್ದರು.