ಮಡಿಕೇರಿ, ಡಿ. ೮ : ಶನಿವಾರಸಂತೆ ಮತ್ತು ಮಲ್ಲಿಪಟ್ಟಣ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೆöÊಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿAದ ಈ ಉಪ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲ್ಲಿ ತಾ. ೧೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.