ವೀರಾಜಪೇಟೆ, ಡಿ. ೮: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಅರ್ಥಶಾಸ್ತç ಪ್ರಾಧ್ಯಾಪಕರು ಹಾಗೂ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಹೆಚ್.ವಿ. ನಾಗರಾಜು ಅವರು ಪ್ರಾಧ್ಯಾಪಕ ಸೇವೆಯಿಂದ ವಯೋನಿವೃತ್ತರಾಗಿದ್ದು ಅವರನ್ನು ಕಾವೇರಿ ಕಾಲೇಜು ವೀರಾಜಪೇಟೆ ವತಿಯಿಂದ ಬೀಳ್ಕೊಡಲಾಯಿತು. ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಸಲ್ಡಾನ ನಿವೃತ್ತರಾದ ಪ್ರಾದ್ಯಾಪಕ ನಾಗರಾಜು ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕಾವೇರಿ ಪಿ.ಯು. ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ, ಐಕ್ಯೂಎಸಿ ಸಂಚಾಲಕಿ ಪ್ರಿಯ ಮುದ್ದಪ್ಪ, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.