ಕೂಡಿಗೆ, ಡಿ. ೮: ಕೂಡಿಗೆಯ ಶ್ರೀ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮುರುಳಿ ಜಿಲ್ಲಾಮಟ್ಟದ ಉದ್ದಜಿಗಿತ ಸ್ಪರ್ಧೆ ಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣ ದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ದೈಹಿಕ ಶಿಕ್ಷಕ ಗಣೇಶ್ ಕುಮಾರ್ ತರಬೇತಿ ನೀಡಿದ್ದಾರೆ.