ಕುಶಾಲನಗರ, ಡಿ. ೮: ಗಾಂಧೀಜಿ ಅವರ ತತ್ವ ಸಿದ್ಧಾಂತಗಳು ಸಾರ್ವಕಾಲಿಕವಾಗಿವೆ ಎಂದು ಕೊಡಗು ವಿಶ್ವವಿದ್ಯಾಲಯ ಉಪಕುಲಪತಿ ಪ್ರೊ ಅಶೋಕ ಸಂಗಪ್ಪ ಆಲೂರ ಹೇಳಿದರು.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಗಾಂಧಿ ಅಧ್ಯಯನ ಪೀಠ, ರಾಷ್ಟಿçÃಯ ಸೇವಾ ಯೋಜನೆ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಗಾಂಧೀಜಿಯವರ ಆತ್ಮಕಥೆ ನೂರರ ಸಂಭ್ರಮ ಗಾಂಧಿ ಸ್ಮಾರಕ ನಿಧಿ ಮತ್ತು ಭೂದಾನ ಚಳುವಳಿಯ ೭೫ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಮತ್ತು ಸಮಕಾಲಿನ ಪ್ರಸ್ತುತತೆ ಬಗ್ಗೆ ಮಾತನಾಡಿದ ಅವರು ಗಾಂಧೀಜಿಯವರ ಚಿಂತನೆಗಳು ಎಂದೆAದಿಗಿAತ ಇಂದಿನ ದಿನಗಳಲ್ಲಿ ಪ್ರಸ್ತುತವಾಗಿವೆ. ಗಾಂಧೀಜಿ ಅವರ ಸತ್ಯಾನ್ವೇಷಣೆ ಸತ್ಯ ಆದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಈ ಮೂಲಕ ಗಾಂಧೀಜಿಯವರ ಕನಸಿನ ಭಾರತವನ್ನು ನನಸಾಗಿಸಲು ಸಾಧ್ಯ ಎಂದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಕಾರ್ಯಕ್ರಮ ಅಧಿಕಾರಿ ಡಾ. ಅಬಿದ ಬೇಗಮ್ ಮಾತನಾಡಿ, ಗಾಂಧಿ ಸ್ಮಾರಕ ನಿಧಿ ಮೂಲಕ ರಾಜ್ಯದ ಎಲ್ಲೆಡೆ ಗಾಂಧೀಜಿ ವಿಚಾರಗಳ ಬಗ್ಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ಪುಟ್ಟರಾಜು ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನದಲ್ಲಿ ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಹಾಗೂ ಗಾಂಧಿ ಅಧ್ಯಯನ ಪೀಠದ ಸಂಯೋಜಕರಾದ ಆಯೀಶ ಸಿದ್ದಿಕ್ ಕೆ.ಎಚ್., ಐಕ್ಯೂಎಸಿ ಸಂಚಾಲಕಿ ಡಾ ಮಧುಶ್ರೀ, ರಾಷ್ಟಿçà ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ನಮಿತಾ, ಡಾ ಬಿ.ಕೆ. ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
ಸಮ್ಮೇಳನದಲ್ಲಿ ಗಾಂಧೀಜಿಯವರ ವಿಚಾರಗಳ ಸಮಕಾಲಿನ ಪ್ರಸ್ತುತತೆ ವಿಷಯದ ಬಗ್ಗೆ ಬೆಂಗಳೂರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಲಹೆಗಾರ ಡಾ ಎಸ್ ತುಕಾರಾಂ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ಗೋಷ್ಠಿಯ ಅಧ್ಯಕ್ಷತೆಯನ್ನು ಮೈಸೂರು ಒಡನಾಡಿ ಸಾಮಾಜಿಕ ಕಾರ್ಯಕರ್ತರಾದ ಸ್ಟಾö್ಯನ್ಲಿ ವಹಿಸಿದ್ದರು.
ಗಾಂಧೀಜಿಯವರ ತತ್ವ ಚಿಂತನೆಗಳು ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಂಚಾಲಕರಾದ ಬಾ ಅಬಿದ ಬೇಗಂ ವಿಷಯ ಮಂಡಿಸಿದರು.
ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಜಮೀರ್ ಅಹ್ಮದ್ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದು ಸಹಪ್ರಾಧ್ಯಾಪಕರಾದ ಬಿ.ಕೆ. ಕುಮಾರ್ ನಿರ್ವಹಣೆ ಮಾಡಿದರು.
ಮೂರನೇ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಅವರು ಸರ್ವೋದಯ ವಿಷಯದ ಬಗ್ಗೆ ವಿಷಯ ಮಂಡಿಸಿದರು.