ಬೆಳಗಾವಿ, ಡಿ. ೯: ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು.
ಸ್ವಾತಂತ್ರö್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತçವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗ ಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟçಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ ಎಂದರು.