ಪೊನ್ನಂಪೇಟೆ, ಡಿ. ೧೦ : ಕೊಡಗು ವಿಶ್ವ ವಿದ್ಯಾನಿಲಯದ ಅಂತರ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ವಾಲಿಬಾಲ್ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮಹಿಳೆಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಕಾಲೇಜು ತಂಡ ರನ್ನರ್ಸ್ ಸ್ಥಾನ ಪಡೆದುಕೊಂಡಿದೆ.
ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕ ಎಂ. ಟಿ. ಸಂತೋಷ್ ತರಬೇತಿ ನೀಡಿದ್ದಾರೆ.