ಗೋಣಿಕೊಪ್ಪಲು, ಡಿ. ೧೦ : ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ವೇದಿಕೆಯಾಗಿದೆ ಎಂದು ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು, ಪ್ರತಿ ಮಕ್ಕಳಲ್ಲಿಯೂ ವಿಶೇಷ ರೀತಿಯ ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಹೊರತರಲು ಉತ್ತಮ ವೇದಿಕೆಗಳು ನಿರ್ಮಾಣವಾಗಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಆಂತರಿಕವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಕೆಲಸವನ್ನು ಮಾಡಬೇಕು. ಶಾಲಾಭಿವೃದ್ದಿ ಸಮಿತಿ ಪೋಷಕರು ಹಾಗೂ ಶಿಕ್ಷಕ ಸಮನ್ವಯತೆ ಕೆಲಸ ಮಾಡಿದರೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಶಾಲೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕೂಡ ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಪ್ರಜೆಯಾಗಿ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದರು.

ವೀರಾಜಪೇಟೆ ತಾಲೂಕು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ. ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಣ ಇಲಾಖೆಯು ಮಕ್ಕಳ ಪ್ರತಿಭೆ ಆನಾವರಣಕ್ಕೆ ಪ್ರತಿಭಾ ಕಾರಂಜಿಯನ್ನು ಆಯೋಜಿಸುತ್ತಿದೆ. ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳನ್ನು ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿರುವ ವಿದ್ಯಾರ್ಥಿಗಳಲ್ಲಿ ವಿಶೇಷವಾದ ಪ್ರತಿಭೆಗಳು ಅಡಗಿವೆ. ಅವುಗಳನ್ನು ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ಕಾರ್ಯಕ್ರಮವಾಗಿ ರೂಪುಗೊಳ್ಳುತ್ತಿದೆ ಎಂದರು.

ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಜಗದೀಶ್ ಜೋಡುಬೀಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಸಾಕಷ್ಟು ಪ್ರತಿಭೆಯನ್ನು ಹೊಂದಿರುವ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಓದಿ ನೊಂದಿಗೆ ಇತರೆ ಚಟುವಟಿಕೆಗಳು ಹೆಚ್ಚಾಗಿ ಲಭ್ಯವಾಗಬೇಕು. ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದರು.

ಗ್ಯಾರAಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಜಾನ್ಸನ್ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭೆ ಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಉತ್ತಮ ಭವಿಷ್ಯ ರೂಪಿ ಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಆ ನಿಟ್ಟಿನಲ್ಲಿ ಗೋಣಿಕೊಪ್ಪ ಹಾಗೂ ಇತರೆ ಸರ್ಕಾರಿ ಶಾಲೆಯ ಶಿಕ್ಷಕರು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು. ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಜೆ. ಆನಂದ ಮಾತನಾಡಿ, ಸರ್ಕಾರದ ಯೋಜನೆಗಳು ಪ್ರಾಥಮಿಕ ಹಂತದಿAದಲೇ ವಿದ್ಯಾರ್ಥಿಗಳಿಗೆ ಸಿಗಲು ಇಂತಹ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗಿದೆ. ಪ್ರತಿಯೋರ್ವ ವಿದ್ಯಾರ್ಥಿ ಯಲ್ಲಿಯೂ ಪ್ರತಿಭೆಗಳು ಅಡಗಿರುತ್ತವೆ. ವೇದಿಕೆಗಳು ಲಭ್ಯವಾದಲ್ಲಿ ಪ್ರತಿಭೆ ಅನಾವರಣಕ್ಕೆ ಸಾಧ್ಯವಾಗುತ್ತದೆ. ಅದರಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದರು.

ವೇದಿಕೆಯಲ್ಲಿ ಪ್ರಧಾನಮಂತ್ರಿ ಪೋಷಣ್‌ಶಕ್ತಿ ನಿರ್ಮಾಣ್, ಸಹಾಯಕ ನಿರ್ದೇಶಕÀ ಕೆ.ಆರ್. ರಾಜೇಶ್, ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಕ ಡಾ. ಸಿ.ಎಂ. ಸೋಮಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ತಿಮ್ಮಯ್ಯ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸದಸ್ಯರುಗಳಾದ ಚೈತ್ರ ಬಿ. ಚೇತನ್, ಪುಷ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಮುಖ್ಯ ಶಿಕ್ಷಕರುಗಳ ಸಂಘದ ಅಧ್ಯಕ್ಷ ಬಿ.ಪಿ. ಉತ್ತಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ. ಸೋಮಯ್ಯ, ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷೆ ಹೆಚ್.ಎಂ. ಪಾರ್ವತಿ, ಶಾಲೆಯ ಶಿಕ್ಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಹಾಜರಿದ್ದರು. ವಿವಿಧ ಭಾಗದಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಅತಿಥಿಗಳನ್ನು ಬ್ಯಾಂಡ್ ಸೆಟ್‌ನೊಂದಿಗೆ ಮೆರವಣಿಗೆಯಲ್ಲಿ ವೇದಿಕೆಗೆ ಕರೆ ತಂದರು.

ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ಮಕ್ಕಳು ವಿವಿಧ ವೈಯುಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.ಮಕ್ಕಳು ಕಂಠಪಾಠ ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಶಾಲೆಯ ಮುಖ್ಯ ಶಿಕ್ಷಕ ಶಿಕ್ಷಕಿ ಚಂದನ ಮಂಜುನಾಥ್, ಓಮನ ನಿರೂಪಿಸಿ ಹೆಚ್.ಕೆ.ಕುಮಾರ್ ಸ್ವಾಗತಿಸಿ, ಕೆ.ಆರ್.ರಾಜೇಶ್ ವಂದಿಸಿದರು.