ಮಡಿಕೇರಿ, ಡಿ. ೧೦: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹಾಗೂ ಅಶ್ಲೀಲ ಪದ ಪ್ರಯೋಗಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿಯ ರಾಣಿಪೇಟೆ ನಿವಾಸಿ ಎಂ.ಇ. ಫಹದ್, ತ್ಯಾಗರಾಜ ಕಾಲೋನಿಯ ಎಂ.ಹೆಚ್. ಬಸಿಲ್ ಹಾಗೂ ಎಂ.ಎA. ಸಮೀರ್ ಬಂಧಿತ ಆರೋಪಿಗಳು. ನಗರದ ಸ್ಪೆöÊಸಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ಯುವಕರು, ಪ್ರಧಾನಿ ಮೋದಿ ಕುರಿತಾಗಿ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳಿಂದ ನಿಂದಿಸಿ ವೀಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದು ವೈರಲ್ ಆದ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ ನಗರ ಠಾಣೆಯಲ್ಲಿ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
ಇಂದು ಪ್ರತಿಭಟನೆ : ಪ್ರಧಾನಿ ಕುರಿತಾಗಿ ಅವಹೇಳನ ವೀಡಿಯೋ ಹರಿಬಿಟ್ಟಿರುವುದನ್ನು ಖಂಡಿಸಿ ಹಾಗೂ ಟಿಪ್ಪು ಜಯಂತಿ ಆಚರಣೆ ಪುನರಾರಂಭ ಕುರಿತು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪ ಸರಕಾರಕ್ಕೆ ಪ್ರಸ್ತಾಪಿಸಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ವತಿಯಿಂದ ತಾ. ೧೧ರಂದು (ಇಂದು) ಮಡಿಕೇರಿಯ ಚೌಕಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.