ಮಡಿಕೇರಿ, ಡಿ.೧೦: ಇಂದಿನ ಸಾಮಾಜಿಕ ಜಾಲತಾಣ ಯುಗದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ರಕ್ಷಣೆ ಪರಿಣಾಮಕಾರಿಯಾಗಿ ದೊರೆಯುತ್ತದೆ ಎಂಬುದು ಒಂದೆಡೆಯಾದರೆ, ಇದನ್ನು ದುರುಪಯೋಗ ಪಡಿಸಿಕೊಳ್ಳುವುದು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಮಾನವ ಹಕ್ಕುಗಳ ಸಂರಕ್ಷಣೆಯತ್ತ ಒತ್ತು ನೀಡುವುದು ಅಗತ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಅವರು ಕರೆ ನೀಡಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣ ಯುಗದಲ್ಲಿ ಸಿಸಿಟಿವಿ, ವಾಯ್ಸ್ ರೆಕಾರ್ಡ್, ವೀಡಿಯೋ ರೆಕಾರ್ಡ್, ಕಾಲ್ ರೆಕಾರ್ಡ್ ಹೀಗೆ ಹಲವು ಜಾಲತಾಣಗಳನ್ನು ಸಾಕ್ಷಿಯಾಗಿ ಪರಿಗಣಿಸಿ ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಒಂದೆಡೆಯಾದರೆ, ತಿಳಿದೋ ತಿಳಿಯದೆ ಘಟನೆಗಳು ಆದಾಗ ಅದನ್ನೇ ನೆಪವಾಗಿ ಇಟ್ಟುಕೊಂಡು ಮಾನವರನ್ನು ಪೀಡಿಸುವುದು ಅಥವಾ ಸತಾಯಿಸುವುದು ಸಹ ಕಂಡುಬರುತ್ತದೆ. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಆದ್ದರಿಂದ ಮಾನವರ ವೈಯಕ್ತಿಕ ಹಕ್ಕುಗಳ ಜೊತೆಗೆ ಇತರರ ಹಕ್ಕುಗಳನ್ನು ಸಂರಕ್ಷಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದAತೆ ಎಚ್ಚರವಹಿಸಬೇಕು ಎಂದು ಶುಭ ಅವರು ಪ್ರತಿಪಾದಿಸಿದರು.

ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಹಿಂದುಳಿದವರಿಗೆ ಅವಕಾಶಗಳನ್ನು ಕಲ್ಪಿಸುವುದು ಅಗತ್ಯ. ಈ ದಿಸೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಅದನ್ನು ಪಡೆಯುವಲ್ಲಿ ಸಹಕಾರ ನೀಡಬೇಕು. ‘ವಸುದೈವ ಕುಟುಂಬ’ ಎಂಬAತೆ ಇಡೀ ವಿಶ್ವವೇ ಒಂದು ಕುಟುಂಬವಾಗಿದ್ದು, ಯಾವುದೇ ಜಾತಿ, ಧರ್ಮ, ಅಂತಸ್ತಿನಿAದ ಅಳೆಯುವಂತಿಲ್ಲ. ಪ್ರತಿಯೊಬ್ಬರನ್ನೂ ಇತರರಂತೆ ಕಾಣಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಶ್ರಮಿಸುತ್ತಿದೆ. ಆ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದ ಮೂಲಕ ವಕೀಲರನ್ನು ನಿಯೋಜಿಸಿ ಅವಕಾಶ ವಂಚಿತರಿಗೆ ನ್ಯಾಯ ಕಲ್ಪಿಸಲಾಗುವುದು ಎಂದು ಶುಭ ಅವರು ನುಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮಾತನಾಡಿ, ಸಮಾಜದಲ್ಲಿ ಧಮನಿತರಿಗೆ ಧ್ವನಿ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಮಾನವ ಹಕ್ಕುಗಳನ್ನು ಕಲ್ಪಿಸಬೇಕು.

ರಾಷ್ಟçದ ೧೫೦ ಕೋಟಿ ಜನರಲ್ಲಿ ಸಮಾನ ಅವಕಾಶ ಕಲ್ಪಿಸುವುದು ಅಗತ್ಯ. ಆ ನಿಟ್ಟಿನಲ್ಲಿ ಮಾನವ ಜನ್ಮ ದೊಡ್ಡದು ಎಂಬAತೆ, ಮಾನವ ಹಕ್ಕುಗಳು ಎಲ್ಲರಿಗೂ ಸಮಾನವಾಗಿ ದೊರಕಬೇಕು.

ಮಾನವ ಸಮಾಜ ಜೀವಿಯಾಗಿದ್ದು, ಒಬ್ಬರು ಮತ್ತೊಬ್ಬರನ್ನು ಅವಲಂಬಿಸಿರುತ್ತಾರೆ. ಆದ್ದರಿಂದ ಮಹಿಳೆಯರು, ಮಕ್ಕಳು, ವಿಶೇಷಚೇತನರು ಸೇರಿದಂತೆ ಎಲ್ಲರನ್ನು ಗೌರವಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಪ್ರಪಂಚದಲ್ಲಿ ಶಾಂತಿ, ನ್ಯಾಯ ಮತ್ತು ಸ್ವಾತಂತ್ರö್ಯವನ್ನು ಸ್ಥಾಪಿಸಲು ಮಾನವ ಕುಟುಂಬದ ಎಲ್ಲಾ ಸದಸ್ಯರಲ್ಲೂ ಅಡಕವಾಗಿರುವ ಘನತೆ ಹಾಗೂ ಸಮಾನವಾದ ಮತ್ತು ಬೇರ್ಪಡಿಸಲಾಗದಂತಹ ಹಕ್ಕುಗಳನ್ನು ಗುರುತಿಸುವುದು ಎಂದು ತಿಳಿಸಲಾಗಿದೆ ಎಂದರು.

ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ. ಬಸಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಿದಾನಂದ ಕುಮಾರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿ.ಪಂ. ಇಂಜಿನಿಯರ್ ನಾಯಕ್, ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕಿ ಮಮತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಮಧುಕರ, ಮಹೇಶ್, ವಿವಿಧ ಇಲಾಖೆ ಸಿಬ್ಬಂದಿಗಳು ಇತರರು ಇದ್ದರು.