ಮಡಿಕೇರಿ, ಡಿ. ೧೦: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವಾರ್ಷಿಕ ಮಹಾಸಭೆ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಉಪ ವಿಭಾಗಧಿಕಾರಿ ನಿತಿನ್ ಚಕ್ಕಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
೨೦೨೪-೨೦೨೫ನೇ ಸಾಲಿನಲ್ಲಿ ನಿಧನರಾದ ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್, ಸಾವಿತ್ರಿ, ಗೈಡ್ ವಿಭಾಗದ ಸಂಘಟಕರಾಗಿದ್ದ ಜಾನಕಿ ವೇಣುಗೋಪಾಲ್ ಅವರುಗಳಿಗೆ ಸಂತಾಪ ಸೂಚಿಸಲಾಯಿತು.
ಪ್ರಾಸ್ತವಿಕವಾಗಿ ಜಿಲ್ಲಾ ಸ್ಕೌಟ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ ಮಾತನಾಡಿದರು. ಹಿಂದಿನ ಸಾಲಿನ ವರದಿಯನ್ನು ಜಿಲ್ಲಾ ಕಾರ್ಯದರ್ಶಿಯ ಎಂ.ಎA ವಸಂತಿ ಮಂಡಿಸಿದರು. ೨೦೨೪-೨೦೨೫ನೇ ಸಾಲಿನ ವಾರ್ಷಿಕ ಚಟುವಟಿಕೆಯ ಕಾರ್ಯಕ್ರಮವನ್ನು ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ ಮಂಡಿಸಿದರು. ೨೦೨೫-೨೦೨೬ನೇ ಸಾಲಿನ ಕಾರ್ಯಯೋಜನೆ ಬಗ್ಗೆ ಕುಶಾಲನಗರ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಮಾಹಿತಿ ನೀಡಿದರು.
೨೦೨೪-೨೦೨೫ನೇ ಸಾಲಿನ ಲೆಕ್ಕಪತ್ರ ಆಡಿಟ್ ವರದಿಯನ್ನು, ೨೦೨೫-೨೦೨೬ನೇ ಆಯವ್ಯಯವನ್ನು ಜಿಲ್ಲಾ ಸಂಸ್ಥೆಯ ಖಜಾಂಚಿ ಟಿ.ಎಂ.ಮುದ್ದಯ್ಯ ಮಂಡಿಸಿದರು.
ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಧನಂಜಯ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಎಲ್ಲಾ ಕಾರ್ಯಕ್ರಮ ಮಾಡಲು ಖಾಸಗಿ ಶಾಲೆಗಳನ್ನು ಅವಲಂಬಿಸಬೇಕಿದೆ. ಸ್ಥಳೀಯ ಸಂಸ್ಥೆಗಳಿAದ ಉತ್ತಮ ರ‍್ಯಾಲಿಗಳನ್ನು ನಡೆಸುತಿದ್ದೇವೆ ಮತ್ತು ರಕ್ತದಾನ ಶಿಬಿರ, ಪರಿಸರ ಸಂರಕ್ಷಣೆ ಜಾಥಾ, ವನಮಹೋತ್ಸವ ಗೀತಗಾಯನ ಸ್ಪರ್ಧೆ ಮಾಡುತ್ತಿದ್ದೇವೆ. ೨೦೨೩-೨೦೨೪ನೇ ಸಾಲಿನಲ್ಲಿ ಉತ್ತಮ ಸ್ಥಳೀಯ ಸಂಸ್ಥೆ ಎಂದು ರಾಜ್ಯ ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯ ಅವರಿಂದ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದೇವೆ ಎಂದು ತಿಳಿಸಿದರು.
ಪೊನ್ನಂಪೇಟೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಮಾತನಾಡಿ, ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಸ್ಕೌಟ್ಸ್ ಗೈಡ್ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ ಎಂದು ನುಡಿದರು.
ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಮಾತನಾಡಿ, ಕುಶಾಲನಗರದಲ್ಲಿ ಎಲ್ಲಾ ದಾನಿಗಳ ಸಹಕಾರದಿಂದ, ಜಿಲ್ಲಾ ಸಂಸ್ಥೆಯ ಸಹಾಯದಿಂದ ರ‍್ಯಾಲಿಯನ್ನು ಮಾಡಿದ್ದೇವೆ. ಮುಂದೆಯೂ ಕುಶಾಲನಗರದಲ್ಲಿ ಮಕ್ಕಳಿಗಾಗಿ ಉತ್ತಮ ಕಾರ್ಯಕ್ರಮಗಳನ್ನು ಎಲ್ಲರ ಸಹಕಾರದೊಂದಿಗೆ ಮಾಡುತ್ತೇವೆ ಎಂದು ನುಡಿದರು.
ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಗೈಡ್ ಕ್ಯಾಪ್ಟನ್ ಚಂದ್ರಕಲಾ ಮಾತನಾಡಿದರು. ಅಂಕೂರ್ ಶಾಲೆಯ ಸ್ಕೌಟ್ ಮಾಸ್ಟರ್ ಮತ್ತು ವಿಧ್ಯಾರ್ಥಿಗಳು ಲಕ್ನೋದಲ್ಲಿ ನಡೆದ ಜಾಂಬೂರಿಯಲ್ಲಿ ಭಾಗವಹಿಸಿದ ಅನುಭವವನ್ನು ಹಂಚಿಕೊAಡರು.
ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಕುಶಾಲನಗರ ಸ್ಥಳೀಯ ಸಂಸ್ಥೆಯವರು ಪ್ರಸ್ತುತ ಸಾಲಿನಲ್ಲಿ ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದ್ದು. ೨೦೨೪-೨೦೨೫ನೇ ಸಾಲಿನ ಉತ್ತಮ ಸ್ಥಳೀಯ ಸಂಸ್ಥೆ ಎಂದು ಗುರುತಿಸಲ್ಪಟಿದ್ದು. ಮುಂದಿನ ದಿನಗಳಲ್ಲಿ ಅವರನ್ನು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸಂಸ್ಥೆಯಿAದ ತರಬೇತಿ ಭವನ ಕಟ್ಟಲು ರೂ. ೨ ಕೋಟಿ ಅನುದಾನ ಬಿಡುಗಡೆ ಮಾಡಲಿದ್ದು ಅದಕ್ಕೆ ಜಾಗದ ಇ ಖಾತೆ ಆಗಬೇಕಾಗಿದ್ದು, ಇದನ್ನು ಮಾಡಿಸಿ ಕೊಡುವಂತೆ ಉಪವಿಭಾಗಧಿಕಾರಿಗಳಲ್ಲಿ ಮನವಿ ಮಾಡಿದರಲ್ಲದೆ ತಾ. ೨೭ ರಿಂದ ಬೆಳಗಾವಿಯಲ್ಲಿ ನಡೆಯುವ ರಾಜ್ಯ ಜಾಂಬೂರಿಯ ಬಗ್ಗೆ ತಿಳಿಸಿದರು.
ಅಧ್ಯಕ್ಷ ಸ್ಥಾನ ವಹಿಸಿದ್ದ ಉಪ ವಿಭಾಗಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿAದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಸಭೆಯಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಗೈಡ್ ಆಯುಕ್ತೆ ರಾಣಿ ಮಾಚಯ್ಯ, ಸ್ಥಾನಿಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಗೈಡ್ ಸಹಾಯಕ ಆಯುಕ್ತೆ ಸುಲೋಚನ, ಎಲ್ಲಾ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು, ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು. ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ ನಿರೂಪಿಸಿದರು.