ನಾಪೋಕ್ಲು, ಡಿ. ೧೦: ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿಯ ೨೦೨೫-೨೬ನೇ ಸಾಲಿನ ಮಹಿಳಾ ಗ್ರಾಮಸಭೆ ಪಂಚಾಯಿತಿ ಸಭಾಂಗಣದಲ್ಲಿ ಜರುಗಿತು.ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಕೃಷಿ ಸಖಿಯರಾದ ಗಿರಿಜಾ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು. ನಂತರ ಪಂಚಾಯಿತಿ ಅಧ್ಯಕ್ಷರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರು ಪಂಚಾಯಿತಿ ಮೂಲಕ ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಮನವಿ ಮಾಡಿದÀರು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಬೀನ ಸುಚಿತ್ರ, ಸದಸ್ಯರುಗಳಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೋಯಮಾಡಂಡ ಹರೀಶ್ ಮೊಣ್ಣಪ್ಪ, ತುಕಡಿ ಸಫಿಯ, ನಂಬುಡಮAಡ ಶೈಲಾ, ಕೋಡಿಮಣಿಯಂಡ ಬೋಪಣ್ಣ, ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರುಗಳು ಸೇರಿದಂತೆ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಜರಿದ್ದರು.