ವೀರಾಜಪೇಟೆ, ಡಿ. ೧೦: ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚಿಗೆ ನಡೆದ ಕೊಡಗು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ವೀರಾಜಪೇಟೆ ಕಾವೇರಿ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಅAತಿಮವಾಗಿ ನಡೆದ ಫೈನಲ್ ಪಂದ್ಯಾಟದಲ್ಲಿ ವೀರಾಜಪೇಟೆ ಕಾವೇರಿ ಕಾಲೇಜಿನ ತಂಡ ಮೂರ್ನಾಡು ಪ್ರಥಮ ದರ್ಜೆ ಕಾಲೇಜನ್ನು ಸೋಲಿಸಿ ಪ್ರಥಮ ಸ್ಥಾನ ಪಡೆಯಿತು. ಮೂರ್ನಾಡು ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.