ಮಡಿಕೇರಿ, ಡಿ. ೧೧: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರ ಕುರಿತು ಏಕವಚನ ಪ್ರಯೋಗ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಖಂಡನೀಯವೆAದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು, ಮುಖ್ಯಮಂತ್ರಿಗಳು ಕೇಂದ್ರದ ಮಹಿಳಾ ಸಚಿವರ ಕುರಿತು ಏಕವಚನ ಬಳಕೆ ಮಾಡುವ ಮೂಲಕ ಸಚಿವ ಸ್ಥಾನಕ್ಕೆ ಮತ್ತು ಸಚಿವರ ಹಿರಿತನಕ್ಕೆ ಅಗೌರವ ತೋರಿದ್ದಾರೆ. ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಿ ಗೌರವಿಸುವ ಈ ನಾಡಿನಲ್ಲಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ಮತ್ತು ನಾಡಿನ ಸಂಸ್ಕೃತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನು ಮುಂದಾದರೂ ಮಹಿಳೆಯರಿಗೆ ಮತ್ತು ಅವರು ಹೊಂದಿರುವ ಹುದ್ದೆಗೆ ಗೌರವ ನೀಡುವ ಮೂಲಕ ಮುಖ್ಯಮಂತ್ರಿಗಳು ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ.

ಇದೇ ವರ್ತನೆ ಮುಂದುವರೆದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆೆ ಎಂದು ಎಚ್ಚರಿಕೆ ನೀಡಿದ್ದಾರೆ.