ಮಡಿಕೇರಿ, ಡಿ. ೧೧ : ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ಹಮಾಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ಕೊಡಗು ಜಿಲ್ಲಾ ಸಮಿತಿ ಆಗ್ರಹಿಸಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮುಂದಾಗಬೇಕೆAದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್. ಭರತ್, ಬಿಪಿಎಂಸಿ, ಮಿಲ್ ಗೋಡೌನ್ ವೇರಹೌಸ್, ನಗರ ಗ್ರಾಮೀಣ ಬಜಾರ, ಬಸ್ ಸ್ಟಾö್ಯಂಡ್, ರೈಲ್ವೆ ಸ್ಟೇಷನ್, ಬಂದರುಗಳಲ್ಲಿ ಲೋಡಿಂಗ್ ಅನ್‌ಲೋಡಿಂಗ್ ಕೆಲಸ ನಿರ್ವಹಿಸುವವರು ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯಿAದ ಅಂಬೇಡ್ಕರ್ ಸಹಾಯ ಹಸ್ತ ಸ್ಮಾರ್ಟ್ ಪಡೆದ ಹಮಾಲಿ ಕಾರ್ಮಿಕರು ಸೇರಿದಂತೆ ೮೫ಕ್ಕೂ ಹೆಚ್ಚು ವಲಯದ ಅಸಂಘಟಿತ ಕಾರ್ಮಿಕರಿಗೆ ಕೇವಲ ಅಪಘಾತ ಸಂಬAಧಿಸಿದ ಕೆಲ ಪರಿಹಾರ ನೀಡುವ ಯೋಜನೆಗಳನ್ನು ಜಾರಿಮಾಡಿದೆ. ಆದರೆ ಸರಕಾರ ನಿರ್ಧಿಷ್ಟವಾಗಿ ಯಾವುದೇ ಹಣಕಾಸಿನ ನೆರವು ನೀಡಿಲ್ಲ ಎಂದರು.

ರಾಜ್ಯದ ಲೋಡಿಂಗ್ ಅನ್‌ಲೋಡಿಂಗ್ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಕಲ್ಯಾಣ ಮಂಡಳಿ ರಚಿಸಬೇಕು, ಕಾರ್ಮಿಕರಿಗೆ ಜಾರಿಮಾಡುತ್ತಿರುವ ಸೌಲಭ್ಯಗಳೊಂದಿಗೆ ಸಹಜ ಮರಣಕ್ಕೂ ರೂ.೧ ಲಕ್ಷ ಪರಿಹಾರ ನೀಡಬೇಕು, ಶವ ಸಂಸ್ಕಾರ ಪರಿಹಾರದ ಮೊತ್ತವನ್ನು ರೂ.೨೫ ಸಾವಿರಕ್ಕೆ ಹೆಚ್ಚಿಸಬೇಕು, ಹಮಾಲಿ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ``ಕರ್ನಾಟಕ ಅಸಂಘಟಿತ ಕಾರ್ಮೀಕರ ಭವಿಷ್ಯನಿಧಿ ಯೋಜನೆ" (ಪಶ್ಚಿಮ ಬಂಗಾಲ ಮಾದರಿ) ಜಾರಿಮಾಡಬೇಕು, ಸೂಕ್ತ ಪಿಂಚಣಿ ಯೋಜನೆಯನ್ನು ಜಾರಿಮಾಡಬೇಕು,

ವೈದ್ಯಕೀಯ ಮರುಪಾವತಿ ಯೋಜನೆ ಮುಂದುವರೆಸಬೇಕು, ಪ್ರತಿವರ್ಷ ೨ ಜೊತೆ ಸಮವಸ್ತç ನೀಡಬೇಕು, ಕಡ್ಡಾಯವಾಗಿ ಕಾರ್ಮಿಕ ಕಾನೂನುಗಳು ಜಾರಿಯಾಗುವಂತೆ ಕ್ರಮವಹಿಸ ಬೇಕು, ಎಲ್ಲಾ ವಿಭಾಗದ ಹಮಾಲಿ ಕಾರ್ಮಿಕರಿಗೆ ಕನಿಷ್ಟ ವೇತನ ಜಾರಿಯಾಗುವಂತೆ ಮುತವರ್ಜಿವಹಿಸಬೇಕು ಮತ್ತು ತಕ್ಷಣವೇ ಕನಿಷ್ಟ ವೇತನ ಪರಿಷ್ಕರಣೆಯಾಗಬೇಕು, ವಸತಿ ಯೋಜನೆಯನ್ನು ಜಾರಿ ಮಾಡಬೇಕು. ಕೇಂದ್ರ ಸರಕಾರದ ಇ-ಶ್ರಮ ಕಾರ್ಡ್ ಪಡೆದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಮಾಡಬೇಕೆಂದು ಒತ್ತಾಯಿಸಿದರು. ಉಪಾಧ್ಯಕ್ಷರುಗಳಾದ ಎ.ಕೆ. ಸುಲೈಮಾನ್, ಆರ್.ಎನ್. ರಾಜು, ಎ. ಗೋಪಿ, ಪ್ರಮುಖರಾದ ರಾಜು, ಹೆಚ್.ಆರ್. ಕವನ್ ಕುಮಾರ್ ಮನವಿ ನೀಡುವ ಸಂದರ್ಭ ಹಾಜರಿದ್ದರು.