ಸಿದ್ದಾಪುರ, ಡಿ.೧೨ : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿ ನಡೆದಿದೆ.

ಸಿದ್ದಾಪುರದ ಎಸ್‌ಎನ್‌ಡಿಪಿ ಕಟ್ಟಡದಲ್ಲಿ ವ್ಯಾಪಾರ ಮಾಡಿಕೊಂಡಿರುವ ಕರಡಿಗೋಡು ನಿವಾಸಿ ಸ್ವಸ್ತಿಕ್ ಜೋಶಿ (೨೮) ತಮ್ಮ ಕೆಲಸದ ನಿಮಿತ್ತ ಬೈಕ್‌ನಲ್ಲಿ (ಕೆ.ಎ.೧೨ವಿ೬೩೧೧) ಸಿದ್ದಾಪುರದ ವೀರಾಜಪೇಟೆ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕಿನ ಸಮೀಪದಲ್ಲಿ ತೆರಳಿ ಹಿಂತಿರುಗಿ ಬರುವ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ದೇವಸ್ಥಾನದ ಬಳಿ ಕಾರು (ಕೆ.ಎಲ್.೧೨-ವಿ.೮೧೫೬) ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸ್ವಸ್ತಿಕ್ ಜೋಶಿ ಅವರ ಎಡಕೈ ಹಾಗೂ ಎಡ ಕಾಲಿಗೆ ಗಂಭೀರ ಗಾಯವಾಗಿದೆ. ಈ ಬಗ್ಗೆ ಸಿದ್ಧಾಪುರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಕಾರು ಚಾಲಕ ರಾಜೇಶ್ ಎಂಬಾತನ ವಿರುದ್ಧ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗಾಯಾಳು ಸ್ವಸ್ತಿಕ್ ಜೋಶಿ ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.