ಗೋಣಿಕೊಪ್ಪಲು, ಡಿ. ೧೨: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ಪೂರ್ವಪ್ರಜ್ಞ ಪದವಿಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಅಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು. ಈ ಕಾರ್ಯಕ್ರಮದಲ್ಲಿ ರಾಜ್ಯದ ೮ ಜಿಲ್ಲೆಗಳ ಸ್ಪರ್ಧಿಗಳು ಭಾಗವಹಿಸಿದ್ದರು. ರಸಪ್ರಶ್ನೆಯಲ್ಲಿ ಕೊಡಗು ಜಿಲ್ಲೆಯ ಗೋಣಿಕೊಪ್ಪ ಅರುವತೊಕ್ಕಲುವಿನ ವಿದ್ಯಾನೀಕೇತನ ಪದವಿಪೂರ್ವ ಕಾಲೇಜಿನ ಹರಿಕೃಷ್ಣನ್ ಎಂ. ಕಾರ್ಯಪ್ಪ ಜೆ.ಸಿ. ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.