ಸುಳ್ಯ, ಡಿ. ೧೩: ಸುಳ್ಯ ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನಲ್ಲಿ ಬಿ.ಇ. ವಿದ್ಯಾರ್ಥಿಗಳಿಂದ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ ಪ್ರಾಜೆಕ್ಟ್ ಎಕ್ಸ್ಪೋ : ೨೦೨೫-೨೬ ನಡೆಯಿತು.
ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಐ.ಟಿ.ಐ. ಪ್ರಾಂಶುಪಾಲ ದಿನೇಶ್ ಮಡ್ತಿಲ ಅವರು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರಾಜೆಕ್ಟ್ ತಯಾರು ಮಾಡುವುದರಿಂದ ಕೌಶಲ್ಯವು ಉತ್ತೇಜನಗೊಳ್ಳುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಮಾತನಾಡಿ, ಪ್ರಾಜೆಕ್ಟ್ ಎಕ್ಸ್ಪೋ ಪ್ರದರ್ಶನಕ್ಕೆ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ಅಲ್ಲದೆ ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಇದು ಸಹಕಾರಿಯಾಗುತ್ತದೆ ಎಂದರು. ಮೆಕ್ಯಾನಿಕಲ್ ಇಂಜಿನಿಯರಿAಗ್ ವಿಭಾಗ ಮುಖ್ಯಸ್ಥ ಪ್ರೊ. ರಾಘವೇಂದ್ರ ಬಿ. ಕಾಮತ್ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಸಿವಿಲ್ ಇಂಜಿನಿಯರಿAಗ್ ವಿಭಾಗದ ಡಾ. ಲೇಖ ಬಿ.ಎಂ. ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿAಗ್ ವಿಭಾಗದ ಪ್ರೊ. ಭವ್ಯ ಪಿ.ಎಸ್. ನಡೆಸಿಕೊಟ್ಟರು. ಕಾಲೇಜಿನ ನಾಲ್ಕು ಇಂಜಿನಿಯರಿAಗ್ ವಿಭಾಗಗಳಿಂದ ಒಟ್ಟು ೧೧೮ಕ್ಕಿಂತಲೂ ಅಧಿಕ ಪ್ರಾಜೆಕ್ಟ್ಗಳು ಪ್ರದರ್ಶಿತಗೊಂಡವು. ಉಪಪ್ರಾಂಶುಪಾಲರು ಮತ್ತು ಗಣಿತ ವಿಭಾಗದ ಮುಖ್ಯಸ್ಥರು ಡಾ. ಶ್ರೀಧರ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಡೀನ್ಗಳು, ವಿದ್ಯಾರ್ಥಿ ಕ್ಷೇಮಾಧಿಕಾರಿ, ಕಾಲೇಜಿನ ಆಡಳಿತಾಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.