ಕೂಡಿಗೆ, ಡಿ. ೧೪: ಕೂಡಿಗೆ ಸೈನಿಕ ಶಾಲೆಯ ೨೦೨೫-೨೬ನೇ ವಾರ್ಷಿಕ ಕ್ರೀಡಾಕೂಟವನ್ನು ಶಾಲೆಯ ಮರಿಯಪ್ಪ ಕೆಂಪಯ್ಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ಆರಂಭಗೊAಡಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಶಾಲೆಯ ಮಾಜಿ ಪ್ರಾಂಶುಪಾಲ ನಿವೃತ್ತ ಕಮೋಡೋರ್ ಎಂ.ಟಿ. ರಮೇಶ್ ನೆರವೇರಿಸಿದರು.
ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಶಿಸ್ತುಬದ್ಧ ಪಥಸಂಚಲನವನ್ನು ನಡೆಸಿಕೊಟ್ಟರು. ಶಾಲೆಯ ಕ್ರೀಡಾ ಉಪ ನಾಯಕ ಕೆಡೆಟ್ ಸೋಹಮ್ ತಂಡಗಳ ನಾಯಕರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಕಮೋಡೋರ್ ಎಂ.ಟಿ. ರಾಮೇಶ್ ಶಾಲೆಯು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿನ ನಿರಂತರ ಸಾಧನೆಗಾಗಿ ಶಾಲೆಯನ್ನು ಅಭಿನಂದಿಸಿದರು. ಜೊತೆಗೆ ವಿದ್ಯಾರ್ಥಿಗಳು ಶಾಲೆಯ ಧ್ಯೇಯವಾಕ್ಯವಾದ ವೀರತೆ, ಧೃಡತೆ ಹಾಗೂ ಪ್ರಾಮಾಣಿಕತೆಯನ್ನು ಪಾಲಿಸುವುದರೊಂದಿಗೆ, ಶಿಸ್ತಿನಿಂದ ನಡೆದುಕೊಳ್ಳಬೇಕೆಂಬ ಸಂದೇಶ ನೀಡಿದರು.
ಪ್ರಾಂಶುಪಾಲರಾದ ಕರ್ನಲ್ ಅಮರ್ಜೀತ್ ಸಿಂಗ್, ಕ್ಯಾಪ್ಟನ್ ಯೋಗೇಶ, ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪ್ರಕಾಶ್ ರಾವ್, ಉಪ ಪ್ರಾಂಶುಪಾಲರಾದ ಸ್ಕಾ÷್ವಡ್ರನ್ ಲೀಡರ್ ಮೊಹಮ್ಮದ್ ಶಾಜಿ ಹಾಗೂ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.