ಕೂಡಿಗೆ, ಡಿ. ೧೪: ತೊರೆನೂರು ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ೨೦೨೫ನೇ ಸಾಲಿನ ಮಹಿಳಾ ಗ್ರಾಮಸಭೆ ಅಧ್ಯಕ್ಷೆ ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಿಳೆಯರ ಹಕ್ಕು, ಕರ್ತವ್ಯಗಳ ಬಗ್ಗೆ ಮತ್ತು ವರದಕ್ಷಿಣೆ, ಬಾಲ್ಯ ವಿವಾಹ ಮುಂತಾದ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು. ಅಧ್ಯಕ್ಷೆ ಶೋಭಾ ಪ್ರಕಾಶ್ ಮಾತನಾಡಿ, ಸರಕಾರದ ಯೋಜನೆ ಗಳನ್ನು ಮಹಿಳೆಯರು ಬಳಕೆ ಮಾಡಿಕೊಳ್ಳುವುದರ ಜೊತೆಗೆ ಸ್ವಯಂ ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿಗಳಾಗುವAತೆ ಕರೆ ನೀಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ರೂಪ ಮಹೇಶ್, ಸದಸ್ಯರಾದ ದೇವರಾಜ್, ಬೇಬಿಯಣ್ಣ, ಶಿವಕುಮಾರ್, ಮಹದೇವ, ಪ್ರಕಾಶ್, ಯಶೋಧ, ಸಾವಿತ್ರಿ, ನಿಂಗಾಜಮ್ಮ, ಅಭಿವೃದ್ಧಿ ಅಧಿಕಾರಿ ಶ್ಯಾಮ್ ಹಾಜರಿದ್ದರು.
ಅಭಿವೃದ್ಧಿ ಅಧಿಕಾರಿ ಶ್ಯಾಮ್, ಕಾರ್ಯದರ್ಶಿ ಸುರೇಶ, ಸಿಬ್ಬಂದಿ ವರ್ಗದವರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಸಾರ್ವಜನಿಕರು ಹಾಜರಿದ್ದರು.
ಸುಮಲತಾ ಸ್ವಾಗತಿಸಿ, ವಂದಿಸಿದರು.