ಸೋಮವಾರಪೇಟೆ, ಡಿ. ೧೪: ವಿದ್ಯಾರ್ಥಿಗಳಿಗೆ ವಿಜ್ಞಾನದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಕಲಿಕೆ ಅವಶ್ಯವಾಗಿದ್ದು, ಶಿಕ್ಷಕರು ವಿಜ್ಞಾನದ ಬಗ್ಗೆ ಮಕ್ಕಳಿಗೆ ಹೆಚ್ಚಿನ ತಿಳುವಳಿಕೆ ನೀಡುವ ಮೂಲಕ ಅವರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಸಂಶೋಧನಾ ಪ್ರವೃತ್ತಿ ಬೆಳೆಸಲು ವಿಶೇಷ ಗಮನ ಹರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಸಲಹೆ ನೀಡಿದರು.
ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ೨೦೨೫-೨೬ನೇ ಸಾಲಿನ ರಾಷ್ಟಿçÃಯ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಐಗೂರು ಸರಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಮೂಲಕ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರದAತಹ ಸಾಮಾಜಿಕ ಪಿಡುಗುಗಳ ವಿರುದ್ಧ ಧ್ವನಿ ಎತ್ತಿ ಸಮಾಜದಲ್ಲಿ ವೈಚಾರಿಕತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಮಕ್ಕಳ ವಿಜ್ಞಾನ ಪ್ರದರ್ಶನಗಳು ಕೇವಲ ಯೋಜನೆಗಳ ಪ್ರದರ್ಶನಗಳಲ್ಲ. ಅವುಗಳು ಹೊಸ ಹೊಸ ನಾವೀನ್ಯತೆ, ಪ್ರಯೋಗಶೀಲತೆ ಮತ್ತು ನೈಜ-ಪ್ರಪಂಚದ ಸನ್ನಿವೇಶಗಳಲ್ಲಿ ವೈಜ್ಞಾನಿಕ ತತ್ವಗಳ ಅನ್ವಯವನ್ನು ಪ್ರೋತ್ಸಾಹಿಸುವ ವೇದಿಕೆಗಳಾಗಿ ರೂಪುಗೊಂಡಿವೆ ಎಂದರು. ರಾಷ್ಟಿçÃಯ ಆವಿಷ್ಕಾರದ ಮುಖ್ಯ ಉದ್ದೇಶ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್, ವಿಜ್ಞಾನ-ತಂತ್ರಜ್ಞಾನ ಬಳಸಿ ಕಲಿಕೋಪಕರಣ ಬಳಸಿದರೆ ಮಕ್ಕಳು ಹೆಚ್ಚು ಆಸಕ್ತಿ ವಹಿಸಿ ಓದುತ್ತಾರೆ. ಅವರಲ್ಲಿ ಸೃಜನಾತ್ಮಕ ಚಿಂತನಾಶೀಲ ವೈಜ್ಞಾನಿಕ ಮನೋಭಾವ ಬೆಳೆಸಲು ಇಂತಹ ವಸ್ತು ಪ್ರದರ್ಶನಗಳು ಸಹಕಾರಿ ಎಂದರು.
ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್ ಮಾತನಾಡಿ, ವಿಜ್ಞಾನ ವಿಷಯವು ನಮ್ಮ ದಿನನಿತ್ಯದ ಅನುಭವಗಳನ್ನು ಪರೀಕ್ಷಿಸಿ ವೀಕ್ಷಿಸುವ ಅವಕಾಶ ನೀಡುತ್ತದೆ. ಇದಕ್ಕೆ ಪೂರಕವಾಗಿ ಪರಿಸರದಲ್ಲಿ ಇರುವ ಸಂಬAಧಗಳಿಗೆ ಮತ್ತು ಚಟುವಟಿಕೆಗಳಿಗೆ ಯೋಜನಾ ಕಾರ್ಯ ರೂಪವಾಗಿ ಮಕ್ಕಳ ಮುಂದೆ ಪ್ರದರ್ಶಿಸಿ ಅನ್ವೇಷಣೆಯ ಕಲಿಕೆಗೆ ಜ್ಞಾನ ಕಟ್ಟಿಕೊಟ್ಟರೆ ಅವರು ಭವಿಷ್ಯದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದರು.
ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್, ವಿಜ್ಞಾನ ಶಿಕ್ಷಕಿ ಎಸ್. ಎಸ್. ರಂಜಿನಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎನ್. ವಸಂತ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಮಂಜುನಾಥ್, ಶಾಲಾ ಮುಖ್ಯ ಶಿಕ್ಷಕ ಎಂ.ಎA. ಯಶವಂತ್ ಕುಮಾರ್, ಕಾಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಂ.ಟಿ. ಸರಳಕುಮಾರಿ, ಕಿರಗಂದೂರು ಸರಕಾರಿ ಪ್ರೌಢಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ರಶ್ಮಿ ಸೇರಿದಂತೆ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಕ್ಷಕರಾದ ಜಿ. ಮಂಜುನಾಥ್ ಮತ್ತು ಹೆಚ್.ಬಿ. ಕೃಷ್ಣಪ್ಪ ಕಾರ್ಯಕ್ರಮ ನಿರ್ವಹಿಸಿದರು.
ಗಮನ ಸೆಳೆದ ವಿಜ್ಞಾನ ವಸ್ತು ಪ್ರದರ್ಶನ: ವಸ್ತು ಪ್ರದರ್ಶನದಲ್ಲಿ ವಿಜ್ಞಾನಕ್ಕೆ ಸಂಬAಧಿಸಿದ ಪರಮಾಣುಗಳ ಮಾದರಿಗಳು, ಡಿಎನ್‌ಎ ರಚನೆ, ಶಬ್ದದ ಗುಣಗಳು, ಮಾನವನ ಹೃದಯ, ನ್ಯೂಟನ್ ನಿಯಮಗಳು, ಆಕಾಶಕಾಯಗಳ ಚಲನೆ, ವಿದ್ಯುತ್ಕಾಂತೀಯ ಪ್ರೇರಣೆ, ರೋಧಕಗಳ ಜೋಡಣೆ, ಬಹು ಪ್ರತಿಬಿಂಬಗಳು, ಕೆಲಿಡೋಸ್ಕೋಪ್, ವಿವಿಧ ರಾಸಾಯನಿಕ ಕ್ರಿಯೆಗಳು, ಸೂಕ್ಷö್ಮದರ್ಶಕದ ಮೂಲಕ ವೀಕ್ಷಣೆ, ಆಹಾರ ಸರಪಳಿ, ಜಲಚಕ್ರ, ಟೆಲಿಸ್ಕೋಪ್, ವಿವಿಧ ವಸ್ತುಗಳಲ್ಲಿ ವಾಹಕತೆ ಸೇರಿದಂತೆ ಹಲವು ಪ್ರಾತ್ಯಕ್ಷಿಕೆಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕ್ಲಸ್ಟರ್‌ನ ಕಾಜೂರು, ಬೇಳೂರು, ಯಡವಾರೆ, ಹೊಸತೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಿರಗಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಸ್ತು ಪ್ರದರ್ಶನವನ್ನು ವೀಕ್ಷಿಸಿ ಮಾಹಿತಿ ಪಡೆದರು.