ಮಡಿಕೇರಿ, ಡಿ. ೧೫ : ಕನ್ನಡ ಉಪ ಭಾಷೆಗಳಲ್ಲಿ ಒಂದಾದ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಲು ಸಿನಿಮಾ, ನಾಟಕ ಹಾಗೂ ಕಿರುಚಿತ್ರಗಳ ನಿರ್ಮಾಣ ಕಾರ್ಯ ಹೆಚ್ಚಾಗಬೇಕು ಎಂದು ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚೊಕ್ಕಾಡಿ ಎನ್. ಅಪ್ಪಯ್ಯ ಸಲಹೆ ನೀಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಸಹಯೋಗದೊಂದಿಗೆ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಬೆಳವಣಿಗೆಯಲ್ಲಿ ಸಮಾಜಗಳ ಪಾತ್ರ ಕುರಿತು ಮಾತನಾಡಿದರು.

ಇಂದಿನ ಸಾಮಾಜಿಕ ಮಾಧ್ಯಮ ಯುಗದಲ್ಲಿ ಸಿನಿಮಾ, ನಾಟಕ, ಸಾಕ್ಷö್ಯಚಿತ್ರ, ಕಿರುಚಿತ್ರಗಳು, ಎಲ್ಲರನ್ನು ಗಮನಸೆಳೆಯುತ್ತವೆ. ಆದ್ದರಿಂದ ಸಾಮಾಜಿಕ ಮಾಧ್ಯಮವು ಪ್ರಬಲವಾಗಿದ್ದು, ಆ ನಿಟ್ಟಿನಲ್ಲಿ ಅರೆಭಾಷೆ ಬೆಳವಣಿಗೆಗೆ ಇವುಗಳ ನಿರ್ಮಾಣ ಕಾರ್ಯ ಅತ್ಯಗತ್ಯ.

ಅರೆಭಾಷೆಯಲ್ಲಿ ಪುಸ್ತಕಗಳನ್ನು ಹೆಚ್ಚಾಗಿ ಪ್ರಕಟಿಸುವಂತಾಗಬೇಕು. ಪುಸ್ತಕಗಳ ಪ್ರಕಟಣೆ ಒಂದು ಗ್ರಂಥವಾಗಿದ್ದು, ಆ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕು ಎಂದು ಅಪ್ಪಯ್ಯ ಅವರು ತಿಳಿಸಿದರು.

೨೦೧೬ ರಿಂದ ಅರೆಭಾಷೆ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ರಾಷ್ಟçದಲ್ಲಿ ೮೦೦ ಕ್ಕೂ ಹೆಚ್ಚು ಸಣ್ಣ ಸಣ್ಣ ಭಾಷೆಗಳಿದ್ದು, ಕನ್ನಡದಲ್ಲಿಯೂ ಸಹ ಹಲವು ಉಪ ಭಾಷೆಗಳಿವೆ. ಆ ನಿಟ್ಟಿನಲ್ಲಿ ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಕರೆ ನೀಡಿದರು.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಸುಮಾರು ೬ ಲಕ್ಷದಷ್ಟೂ ಅರೆಭಾಷಿಕರಿದ್ದು, ಐನ್‌ಮನೆ ಸಂಸ್ಕೃತಿಯನ್ನು ಒಳಗೊಂಡಿದೆ. ಅರೆಭಾಷೆ ಶಾಸ್ತç, ಸಂಪ್ರದಾಯ, ಸಂಸ್ಕೃತಿಗಳು ತನ್ನದೇ ಆದ ಶ್ರೀಮಂತಿಕೆ ಹೊಂದಿದೆ ಎಂದು ಅಪ್ಪಯ್ಯ ಅವರು ನುಡಿದರು. ಅರೆಭಾಷೆ ಬೆಳವಣಿಗೆಯಲ್ಲಿ ಎಲ್ಲರ ಪಾತ್ರ ಪ್ರಮುಖವಾಗಿದ್ದು, ಭಾಷೆ ಮತ್ತು ಸಮಾಜ ಒಂದಕ್ಕೊAದು ಅವಿನಾಭಾವ ಸಂಬAಧವನ್ನು ಹೊಂದಿದೆ.

ಕೊಡಗು ಗೌಡ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷ ಸೂರ್ತಲೆ ಆರ್. ಸೋಮಣ್ಣ ಅವರು ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗೆ ಹಿರಿಯರ ಕೊಡುಗೆ ಕುರಿತು ಮಾತನಾಡಿ, ಅರೆಭಾಷೆ ಸಂಸ್ಕೃತಿ, ಸಂಪ್ರದಾಯಗಳು ವಿಶೇಷತೆಯನ್ನು ಹೊಂದಿದ್ದು, ಸೋಬಾನೆ ಪದಗಳು ತನ್ನದೇ ಆದ ವೈಶಿಷ್ಟö್ಯತೆ ಹೊಂದಿದೆ ಎಂದು ತಿಳಿಸಿದರು. ಹಾಲೇರಿ ಅರಸರ ಕಾಲದಲ್ಲಿ ಅಖಂಡ ಕೊಡಗು ಪಿರಿಯಾಪಟ್ಟಣದಿಂದ ಬಿ.ಸಿ.ರಸ್ತೆ ವರೆಗೂ ವಿಸ್ತಾರವಾಗಿತ್ತು ಎಂಬುದನ್ನು ಸ್ಮರಿಸಬಹುದಾಗಿದೆ ಎಂದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಹಲವು ಸಾಹಿತ್ಯ, ಸಂಸ್ಕೃತಿ ಚಟುವಟಿಕೆ ಕೈಗೊಳ್ಳಲಾಗಿದೆ ಎಂದರು.

ಅಕಾಡೆಮಿ ವತಿಯಿಂದ ನೂರಕ್ಕೂ ಹೆಚ್ಚು ಪುಸ್ತಕಗಳು, ೧೧ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಲಾಗಿದೆ. ಕಥೆ, ಕವನ, ನಾಟಕ, ಮತ್ತಿತರ ಪುಸ್ತಕಗಳನ್ನು ಹೊರತರಲಾಗಿದೆ ಎಂದರು.

ಅಕಾಡೆಮಿ ವತಿಯಿಂದ ಬರಹಗಾರರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ೧೮೦೦ ಕ್ಕೂ ಹೆಚ್ಚು ಮಂದಿ ಹಿಂಗಾರ ತ್ರೆöÊಮಾಸಿಕಕ್ಕೆ ಸದಸ್ಯತ್ವ ಹೊಂದಿದ್ದಾರೆ ಮಾಹಿತಿ ನೀಡಿದರು.

ಅಕಾಡೆಮಿ ವತಿಯಿಂದ ಗಡಿನಾಡ ಉತ್ಸವ, ಗೌರವ ಪ್ರಶಸ್ತಿ ಪ್ರದಾನ ಸಮಾರಂಭ, ಅರೆಭಾಷೆ ದಿನಾಚರಣೆ, ಐನ್‌ಮನೆ ಕಾರ್ಯಕ್ರಮ, ಜೊತೆಗೆ ಕಿರುಚಿತ್ರ ಹಾಗೂ ನಾಟಕ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.

ಮೂರ್ನಾಡು ಗೌಡ ಸಮಾಜದ ಮಾಜಿ ಅಧ್ಯಕ್ಷ ಚೆಟ್ಟಿಮಾಡ ಟಿ.ಕಾರ್ಯಪ್ಪ (ವಸಂತ) ಮಾತನಾಡಿ, ಅರೆಭಾಷೆ, ಸಂಸ್ಕೃತಿ, ಕಲೆ ಉಳಿಸಿ ಬೆಳೆಸುವಂತಾಗಬೇಕು. ಮನೆಯಲ್ಲಿ ಕಡ್ಡಾಯವಾಗಿ ಅರೆಭಾಷೆ ಮಾತನಾಡುವಂತಾಗಬೇಕು. ಇದರಿಂದ ಮಕ್ಕಳು ಅರೆಭಾಷೆ ಕಲಿಕೆಗೆ ಸಹಕಾರಿಯಾಗಲಿದೆ ಎಂದರು.

ಭೂಮಿಯನ್ನು ಯಾವುದೇ ಕಾರಣಕ್ಕೂ ಮಾರಿಕೊಳ್ಳಬಾರದು. ಭೂಮಿ ಮಾರಿಕೊಂಡಲ್ಲಿ ನಮ್ಮ ಸಂಸ್ಕೃತಿಯನ್ನು ಮರೆತಂತೆ ಎಂದು ಅವರು ಹೇಳಿದರು. ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ ಅವರು ಮಾತನಾಡಿ ಮಡಿಕೇರಿ ನಗರದಲ್ಲಿ ಕೊಡಗು ಗೌಡ ವಿದ್ಯಾಸಂಘ ನೂತನ ಕಟ್ಟಡವನ್ನು ೪ ಕೋಟಿ ರೂ. ೫ನೇ ಪುಟಕ್ಕೆ

(ಮೊದಲ ಪುಟದಿಂದ) ೫ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಅಕಾಡೆಮಿ ಸದಸ್ಯರು ಹಾಗೂ ಕಾರ್ಯಕ್ರಮದ ಸಂಚಾಲಕರಾದ ಸಂದೀಪ್ ಪೂಳಕಂಡ ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಅಕಾಡೆಮಿ ವತಿಯಿಂದ ಶ್ರಮಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಚಿಣ್ಣರ ಮೇಳ, ಅಜ್ಜಿಯ ಕಥೆ, ಮತ್ತಿತರ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದೆ ಎಂದರು.

ಅಕಾಡೆಮಿ ಸದಸ್ಯರು ಹಾಗೂ ಕಾರ್ಯಕ್ರಮದ ಸಂಚಾಲಕರಾದ ಸೂದನ ಈರಪ್ಪ ಮಾತನಾಡಿ ಅಕಾಡೆಮಿ ವತಿಯಿಂದ ‘ಅರೆಭಾಷೆ ರಸಪ್ರಶ್ನೆ’ ಸೇರಿದಂತೆ ಹಲವು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಆಕಾಶವಾಣಿಯಲ್ಲಿ ಅರೆಭಾಷೆ ‘ಸುದ್ದಿಜೊಂಪೆ’ ವಾಚಕರಾದ ರೋಹಿಣಿ ಗುಡ್ಡೆಮನೆ, ವಾಣಿ ಚೊಕ್ಕಾಡಿ, ಮಜ್ಜೆಗೌಡನ ಪ್ರೇಮ ಪ್ರಕಾಶ್, ಉಳುವಾರನ ರೋಷನ್ ವಸಂತ್, ಪುದಿಯನೆರವನ ಸ್ವಾತಿ, ಕಲ್ಲುಮುಟ್ಲು ಜಶ್ಮಿ ಚಿಂತು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕು.ಮೇರ್ಕಜೆ ದಿವಿನ್ ಬೋಪಯ್ಯ ಮತ್ತು ಕು.ದೇರಾಜೆ ಭವಿಷ್ಯ ಕಿರಣ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ.ಹರೀಶ್ ಅವರು ಮಾತನಾಡಿದರು. ವಯಸ್ಕರು ಮತ್ತು ಮಕ್ಕಳಿಗೆ ಪ್ರತ್ಯೇಕ ಅರೆಭಾಷೆ ರಸಪ್ರಶ್ನೆ ನಡೆಯಿತು. ವಿಜೇತರಿಗೆ ನಗದು ಬಹುಮಾನ ನೀಡಲಾಯಿತು.

ರಸಪ್ರಶ್ನೆ ಸ್ಪರ್ಧೆಯನ್ನು ಸದಸ್ಯರಾದ ಪಿ.ಎಸ್.ಕಾರ್ಯಪ್ಪ ಮತ್ತು ಕುಂಬುಗೌಡನ ರಂಜಿತ್ ಅವರು ನಡೆಸಿಕೊಟ್ಟರು. ವಿಜೇತರಿಗೆ ನಗದು ಬಹುಮಾನ ನೀಡಲಾಯಿತು. ತೆಕ್ಕಡೆ ಪೂರ್ಣಿಮಾ ಪ್ರಾರ್ಥಿಸಿದರು. ಸೂದನ ಈರಪ್ಪ ಸ್ವಾಗತಿಸಿದರು, ಕಲ್ಲುಮುಟ್ಲು ಜಶ್ಮಿ ಅವರು ನಿರೂಪಿಸಿದರು, ಲತಾ ಪ್ರಸಾದ್ ಕುದ್ಪಾಜೆ ವಂದಿಸಿದರು.