ಸಿದ್ದಾಪುರ, ಡಿ. ೧೬: ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ ಸೇತುವೆ ಬಳಿ ತೀವ್ರವಾಗಿ ಹದೆಗೆಟ್ಟಿದ್ದ ರಸ್ತೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಡಾಂಬರಿಕರಣಕ್ಕೆ ಚಾಲನೆ ನೀಡಲಾಯಿತು.

ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಅನುದಾನದಲ್ಲಿ ರೂ. ೨ ಕೋಟಿ ವೆಚ್ಚದಲ್ಲಿ ನೆಲ್ಲಿಹುದಿಕೇರಿ ಕಾವೇರಿ ಸೇತುವೆ ಬಳಿಯಿಂದ ಕಾಂಕ್ರೀಟ್ ರಸ್ತೆ ಹಾಗೂ ಮುಖ್ಯರಸ್ತೆಯಲ್ಲಿ ಡಾಂಬರಿಕರಣ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಪ್ರಮುಖ ಷಂಶುದ್ದೀನ್ ಮಾತನಾಡಿ, ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ ಸೇತುವೆ ಸಮೀಪದಿಂದ ಮುಖ್ಯ ರಸ್ತೆ ಕಳೆದ ೨೦ ವರ್ಷಗಳಿಂದ ತೀವ್ರವಾಗಿ ಹದಗೆಟ್ಟಿತ್ತು. ಇದೀಗ ಮಂತರ್ ಗೌಡ ಅವರು ನೆಲ್ಲಿಹುದಿಕೇರಿ ಗ್ರಾಮಕ್ಕೆ ಕೋಟ್ಯಂತರ ಅನುದಾನ ನೀಡುವ ಮೂಲಕ ಚುನಾವಣೆ ಸಂದರ್ಭದಲ್ಲಿ ಗ್ರಾಮಸ್ಥರಿಗೆ ನೀಡಿದ ಭರವಸೆಯನ್ನು ಈಡೇರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದಲ್ಲದೆ ಅಭ್ಯತ್‌ಮಂಗಲ ಗ್ರಾಮದ ಒಂಟಿಯAಗಡಿಯಲ್ಲಿ ರಸ್ತೆ ಕಾಮಗಾರಿ ಹಾಗೂ ಕಿರು ಸೇತುವೆ ನಿರ್ಮಾಣಕ್ಕೆ ಎರಡು ಕೋಟಿ ಅನುದಾನದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಈ ಸಂದರ್ಭ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅಪ್ಸಲ್ ಹಕ್ಕೀಂ, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕೆ.ಎಂ. ಬಶೀರ್. ನಿರ್ವಾಣಿ ವಿಜು ಇನ್ನಿತರರು ಹಾಜರಿದ್ದರು.