ಸುಂಟಿಕೊಪ್ಪ, ಡಿ. ೧೬:: ಪ್ರಪಂಚದಲ್ಲಿ ಒಬ್ಬರಿಂದ ಕಿತ್ತುಕೊಳ್ಳಲಾಗದ ಮತ್ತು ಅಪಹರಿಸಲಾಗದ ಸಂಪತ್ತು ಎಂದರೆ ಅದು ವಿದ್ಯೆ ಎಂದು ಸಮಾಜ ಸೇವಕ ಹರಪಳ್ಳಿ ಎನ್.ರವೀಂದ್ರ ಹೇಳಿದರು.

ಶನಿವಾರದಂದು ಇಲ್ಲಿಗೆ ಸಮೀಪದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ೬೧ನೇ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಯಲ್ಲಿರುವ ಈ ಶಾಲೆ ಕನ್ನಡ ಮಾಧ್ಯಮದಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟçಮಟ್ಟದ ಸಾಧನೆ ಮಾಡಿದೆ ಎಂದು ಪ್ರಶಂಸಿದರು. ವಿದ್ಯೆಯಿಂದ ನಮ್ಮ ಬಾಳು ಮಾತ್ರವಲ್ಲ ಸಮಾಜವನ್ನು ಬೆಳಗುವಂತಾಗಬೇಕೆAದು ಕಿವಿಮಾತು ಹೇಳಿದರು. ನಾವು ಏನೇ ಕಲಿತರು ಎಷ್ಟೇ ದೊಡ್ಡವರಾದರೂ ಸಮಾಜಕ್ಕಾಗಿ ಮತ್ತು ಪರಹಿತಕ್ಕಾಗಿ ನಾವು ನಮ್ಮನ್ನು ಸಮರ್ಪಸಿಕೊಳ್ಳುವುದು ನಮ್ಮ ವ್ಯಕ್ತಿತ್ವದ ಭಾಗವಾಗಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿ ಪಾಲ್ಗೊಂಡು ಶಾಲೆಯ ೧೩೮ ಮಕ್ಕಳಿಗೆ ಟ್ರಾö್ಯಕ್‌ಸೂಟ್ ಕೊಡುಗೆಯಾಗಿ ನೀಡಿ ಮಾತನಾಡಿದ ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಅವರು ಸರಕಾರಿ ಶಾಲೆ ಮತ್ತು ಕನ್ನಡ ಮಾಧ್ಯಮ ಶಾಲೆ ಎಂಬ ಕೀಳರಿಮೆ ಬೇಕಾಗಿಲ್ಲ. ಸುಂಟಿಕೊಪ್ಪ ನಾಡು ಪ್ರೌಢಶಾಲೆಯು ಈ ಸಮಾಜಕ್ಕೆ ಅತ್ಯುತ್ತಮ ನಾಗರೀಕರನ್ನು ಕೊಡುಗೆಯಾಗಿ ನೀಡಿದೆ. ಈ ಪರಂಪರೆ ಮುಂದುವರಿಯುತ್ತಿರುವುದು ಶಾಲಾ ವಾರ್ಷಿಕ ವರದಿಯಲ್ಲಿ ಕಂಡು ಬರುತ್ತಿದೆ. ಇದಕ್ಕೆ ಕಾರಣರಾದ ಶಾಲಾ ಶಿಕ್ಷಕ ವೃಂದ ಅವರಿಗೆ ಸಾಥ್ ನೀಡಿದ ವಿದ್ಯಾರ್ಥಿ ಮತ್ತು ಪೋಷಕ ವೃಂದಕ್ಕೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಾಯಿಕುಮಾರ್ ನುಡಿದರು.

ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಮುಖ್ಯೋಪಾಧ್ಯಾಯಿನಿ ಜೋವಿಟಾ ವಾಸ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅನುದಾನಿತ ಶಾಲೆ ಮತ್ತು ಕನ್ನಡ ಮಧ್ಯಮದದಲ್ಲಿ ಕಲಿತವರು ಸಮಾಜದಲ್ಲಿ ಹಿಂದೆ ಬಿದ್ದಿಲ್ಲ. ವಿದ್ಯೆ ಕಲಿಸಿದ ಗುರು ನಮ್ಮ ‘ಹೀರೋ’ ಆಗಬೇಕೆಂದು ಕರೆ ನೀಡಿದರು.

ಶಾಲಾಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಸ್ ಮಂಜುನಾಥ್ ಅವರು ತಮ್ಮ ಅಧ್ಯಕ್ಷೀಯ ಮಾತುಗಳಲ್ಲಿ, ಸರಕಾರಿ ಅನುದಾನಿತ ಶಾಲೆಗಳಿಗೆ ಸರಕಾರ ಮಲತಾಯಿ ಧೋರಣೆ ತೋರಿಸುತ್ತಿದೆ. ಶಿಕ್ಷಕರ ವೇತನ ಹೊರತು ಪಡಿಸಿ ಬೇರೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ. ಸಮಾಜದ ಗಣ್ಯರು, ಸಮಾಜ ಸೇವಕರು ಅನುದಾನಿತ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಸಮಸ್ಯೆಗಳನ್ನು ಸರಕಾರದ ಗಮನಕ್ಕೆ ತರುವಂತಗಾಬೇಕೆAದು ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಬಿ.ಶಂಕರ್, ಉಪಾಧ್ಯಕ್ಷ ಎಂ.ಎ ಕುಟ್ಟಪ್ಪ, ಆಡಳಿತ ಮಂಡಳಿ ನಿರ್ದೇಶಕ ಎಂ.ಎಸ್ ಸುರೇಶ್ ಚಂಗಪ್ಪ, ಭಾರತೀಯ ಎಜುಕೇಷನ್ ಟ್ರಸ್ಟ್ನ ಕಾರ್ಯದರ್ಶಿ ಪಿ.ಎಂ.ರAಜಿತ್ ಕಾರ್ಯಪ್ಪ, ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ನಯನ, ಗಿರಿಧರ್ ಮತ್ತು ಧರ್ಮಪ್ಪ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಕೆ.ಎ ಇಂದಿರಾ ಸ್ವಾಗತಿಸಿ, ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಶಾಲಾ ಶಿಕ್ಷಕ ಶಿವಪ್ಪ ಗುರ್ಕಿ ಕಾರ್ಯಕ್ರಮ ನಿರೂಪಿಸಿ, ಶಾಲಾ ಶಿಕ್ಷಕಿ ಎಂ.ಎಸ್ ದಿನೇಶ್ ಬಹುಮಾನಿತರ ವಿವರವನ್ನು ನೀಡಿದರು. ಮತ್ತೋರ್ವ ಶಿಕ್ಷಕ ಅಡ್ಡಮನಿ ವಂದಿಸಿದರು. ನಂತರ ನಡೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರ ಮನಸೂರೆಗೊಳಿಸಿತು.