ಮಡಿಕೇರಿ, ಡಿ. ೧೬: ೨೦೨೫ರ ಜನವರಿ ೧ ರಿಂದ ನವೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ೨೯೬೩ ಗಂಡು, ೨೯೦೭ ಹೆಣ್ಣು ಸೇರಿ ಒಟ್ಟು ೫,೮೭೦ ಮಕ್ಕಳ ಜನನವಾಗಿದೆ ಎಂದು ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅಧ್ಯಕ್ಷತೆಯಲ್ಲಿ ನಡೆದ ಜನನ - ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಈ ಬಗ್ಗೆ ಮಾಹಿತಿಯಿತ್ತರು.

ಜನನ ಮತ್ತು ಮರಣವನ್ನು ವಿವಿಧ ಹಂತದಲ್ಲಿ ದಾಖಲಿಸಲಾಗುತ್ತದೆ. ೨೦೨೫ರ ಜನವರಿ ೧ ರಿಂದ ನವೆಂಬರ್ ಅಂತ್ಯದ ವರೆಗೆ ಕೊಡಗು ಜಿಲ್ಲೆಯಲ್ಲಿ ಒಟ್ಟು ಗ್ರಾಮೀಣ ಪ್ರದೇಶದಲ್ಲಿ ೩೩೦ ಮತ್ತು ನಗರ ಪ್ರದೇಶದಲ್ಲಿ ೮ ಸೇರಿ ೩೩೮ ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು.

ಮರಣ ಪ್ರಮಾಣ ೨೫೩೯ ಗಂಡು, ೧೭೩೪ ಹೆಣ್ಣು ಸೇರಿ ಒಟ್ಟು ೪,೨೮೩ ಮಂದಿ ಮೃತಪಟ್ಟಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನನ ಮರಣ ಉಪ ನೋಂದಣಿ ಘಟಕವನ್ನು ಸ್ಥಾಪಿಸಿ ಈ ಸಂಸ್ಥೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆಗಳನ್ನು ನೋಂದಣಿ ಮಾಡಿ, ಅರ್ಜಿದಾರರಿಗೆ ನಿಗದಿತ ಸಮಯದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗಿದೆ ಎಂದು ನಾರಾಯಣ ತಿಳಿಸಿದರು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮಾತನಾಡಿ, ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಸೂಚಿಸಿದರು.

ರಾಷ್ಟçದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ ೧೯೬೦ ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ ೧೯೭೦ ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ ೧೯೯೦ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಆ ನಿಟ್ಟಿನಲ್ಲಿ ಕಾಲಕಾಲಕ್ಕೆ ಈ ಕಾರ್ಯ ಆಗಬೇಕು.

ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮೀಣ ಭಾಗದಲ್ಲಿ ೨೦೧೫ ರ ಏಪ್ರಿಲ್ ೧ ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾAಶದ ಮೂಲಕ ಆನ್‌ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಈ ಕಾರ್ಯದ ಪ್ರಗತಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಈಗಾಗಲೇ ಜನನ ಮತ್ತು ಮರಣ ನೋಂದಣಿ ಸಂಬAಧ ಗ್ರಾ.ಪಂ.ಕಾರ್ಯದರ್ಶಿಯವರನ್ನು ಉಪ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ. ಈ ನಿಟ್ಟಿನಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ ೩೦ ದಿನದೊಳಗೆ ಜನನ ಮತ್ತು ಮರಣ ನೋಂದಣಿ ಮಾಡಬೇಕು. ೩೦ ದಿನದ ನಂತರ ಗ್ರಾಮ ಆಡಳಿತ ಅಧಿಕಾರಿಯನ್ನು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದ್ದು, ಈ ನೋಂದಣಿಯನ್ನು ೩೦ ದಿನದೊಳಗೆ ಇ-ಜನ್ಮ ತಂತ್ರಾAಶದಲ್ಲಿ ದಾಖಲು ಮಾಡಬೇಕು ಎಂದರು.

ಈಗಾಗಲೇ ದತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು ೨೦೨೨ರ ಸೆಕ್ಷನ್ ೪೦ ಮತ್ತು ೪೮ ರಂತೆ ತಿದ್ದುಪಡಿ ಮಾಡಲಾಗಿದ್ದು, ಯಾವುದೇ ಏಜೆನ್ಸಿಗಳು ದತ್ತು ಮಕ್ಕಳನ್ನು ಪಡೆಯಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಜನನ ಪ್ರಮಾಣ ಪತ್ರವನ್ನು ನಿಯಮಾನುಸಾರ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಸರಳೀಕರಣಗೊಳಿಸುವ ಮತ್ತು ನಾಗರಿಕ ಸ್ನೇಹಿ ಮಾಡುವಲ್ಲಿ ಮುಂದಾಗಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿನ ಜನನ ಪ್ರಮಾಣ ಪತ್ರವನ್ನು ಎರಡು ಮೂರು ದಿನದೊಳಗೆ ಪಡೆಯಬಹುದಾಗಿದೆ ಎಂದು ಹೇಳಿದರು. ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆರೋಗ್ಯ ಅಧಿಕಾರಿಯವರು ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ.ವೆಂಕಟೇಶ್, ಬಿ.ಎಂ. ಗಾನವಿ ಇತರರು ಇದ್ದರು.