ಮಡಿಕೇರಿ, ಡಿ. ೧೮: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ ೧೧ ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ೨೦೨೪-೨೫ ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಬೆಳೆ ಸಮೀಕ್ಷೆ ಪರಿಶೀಲನೆ ಸಂಬAಧಿಸಿದAತೆ ಮಾಹಿತಿ ನೀಡುವುದು, ೧೧ ನೇ ಕೃಷಿ ಗಣತಿಯ ಮೂರನೇ ಹಂತದ ಬಗ್ಗೆ ಮಾಹಿತಿ ಒದಗಿಸುವುದು ಹಾಗೆಯೇ ಪ್ರಸಕ್ತ ಸಾಲಿನ ಬೆಳೆ ಕಟಾವು ಸಂಬAಧಿಸಿದAತೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ.ನಾರಾಯಣ ಅವರು ೨೦೨೪-೨೫ನೇ ಸಾಲಿನ ಬೇಸಿಗೆ ಋತುವಿನ ಸಿಎಸ್‌ಎಸ್‌ಟಿ ವರದಿಯಂತೆ ಗ್ರಾಮಾವಾರು, ಹೋಬಳಿವಾರು ಪರಿಶೀಲಿಸಿ ವೆಬ್ ತಂತ್ರಾAಶದಲ್ಲಿ ಮರು ಹೊಂದಾಣಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದರು. ತಾಲೂಕು ಮಟ್ಟದ ಕೃಷಿ ಅಧಿಕಾರಿಗಳಿಂದ ದೃಢೀಕರಿಸಿ ಮರು ಹೊಂದಾಣಿಕೆ ಆಧಾರದ ಮೇಲೆ ಜಿಲ್ಲಾ ವರದಿಯನ್ನು ತಯಾರಿಸಿ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ೨೦೨೫-೨೬ನೇ ಸಾಲಿನ ಮುಂಗಾರು ಋತುವಿನ ಬೆಳೆ ಸಮೀಕ್ಷೆ ಯೋಜನೆ ಯಡಿ ಜಿಲ್ಲೆಗೆ ಹಂಚಿಕೆಯಡಿ ೫೨೫ ಗ್ರಾಮಗಳ ಪೈಕಿ ೧೦೨ ಗ್ರಾಮಗಳಲ್ಲಿ ಸಕಾಲಿಕ ಯೋಜನೆಯಡಿ ಶೇ.೧ ರಷ್ಟು ಮುಂಗಾರು ಬೆಳೆ ಸಮೀಕ್ಷೆ ಹಂಚಿಕೆಯಾಗಿದ್ದು, ಸಮೀಕ್ಷೆಯನ್ನು ಸಾಂಖ್ಯಿಕ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಪೂರ್ಣಗೊಳಿಸ ಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ತಿಳಿಸಿದರು. ಪ್ರಸಕ್ತ ಸಾಲಿನ ಹಿಂಗಾರು ಋತುವಿನ ಬೆಳೆ ಸಮೀಕ್ಷೆಯ ತರಬೇತಿ ಕಾರ್ಯ ಪೂರ್ಣಗೊಂಡಿದ್ದು, ಕ್ಷೇತ್ರ ಕಾರ್ಯ ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು.

೧೧ ನೇ ಕೃಷಿ ಗಣತಿಯ ಮೂರನೇ ಹಂತದ ಕ್ಷೇತ್ರ ಕಾರ್ಯಕ್ಕೆ ಜಿಲ್ಲೆಯ ೨೬ ಗ್ರಾಮಗಳು ಆಯ್ಕೆಯಾಗಿದ್ದು, ಎಲ್ಲಾ ೨೬ ಗ್ರಾಮಗಳ ಕ್ಷೇತ್ರ ಕಾರ್ಯ ಪೂರ್ಣಗೊಂಡಿದೆ. ಈ ೨೬ ಗ್ರಾಮಗಳ ಕ್ರೋಢೀಕೃತ ವರದಿಯನ್ನು ಗಮನಿಸಿದಾಗ ೫೫೮ ಹಿಡುವಳಿದಾರರು ಇದ್ದು, ೨೭೯೪ ಹೆಕ್ಟೇರ್ ಹಿಡುವಳಿ ಪ್ರದೇಶ ಹೊಂದಿದೆ. ಜಿಲ್ಲೆಯಲ್ಲಿ ಪಿಎಂ. ಕಿಸಾನ್ ಯೋಜನೆಯಡಿ ೨೯೯ ರೈತರು ಉಪಯೋಗ ಪಡೆದಿದ್ದಾರೆ. ೧೬೯ ರೈತರು ಮಣ್ಣಿನ ಆರೋಗ್ಯ ಕಾರ್ಡ್ ಪಡೆದಿದ್ದಾರೆ. ಹಾಗೆಯೇ ೩೪೯ ಮಂದಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ್ದಾರೆ ಎಂದು ಡಿ.ನಾರಾಯಣ ವಿವರಿಸಿದರು.

೨೦೨೫-೨೬ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ, ಪ್ರಧಾನಮಂತ್ರಿ ಫಸಲ್ ಭಿಮಾ(ವಿಮೆ) ಯೋಜನೆಯಡಿ ೪೭೬ ಬೆಳೆ ಕಟಾವು ಪ್ರಯೋಗಗಳ ಹಂಚಿಕೆಯಾಗಿದ್ದು, ಇವುಗಳ ಪೈಕಿ ಭತ್ತ (ಮಳೆಯಾಶ್ರಿತ) ೩೩೬, ಭತ್ತ (ನೀರಾವರಿ) ೨೦, ಮುಸುಕಿನ ಜೋಳ (ಮಳೆಯಾಶ್ರಿತ) ೩೦ ಪ್ರಯೋಗಗಳ ಹಂಚಿಕೆಯಾಗಿದೆ ಎಂದು ಹೇಳಿದರು.

ಇಳುವರಿಗೆ ಒಳಪಡದ ಬೆಳೆಗಳಲ್ಲಿ ಶುಂಠಿ (ಮಳೆಯಾಶ್ರಿತ) ೬೦ ಪ್ರಯೋಗಗಳು, ಸಿಹಿಗೆಣಸು (ಮಳೆಯಾಶ್ರಿತ) ೩೦ ಪ್ರಯೋಗಗಳು, ಇವುಗಳ ಪೈಕಿ ೨೫೦ ಪ್ರಯೋಗಗಳು ಪೂರ್ಣಗೊಂಡಿದ್ದು, ಉಳಿದ ೨೨೬ ಪ್ರಯೋಗಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ನಾರಾಯಣ ಹೇಳಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ವೆಂಕಟೇಶ್, ಬಿ.ಎಂ. ಗಾನವಿ, ಇತರರು ಇದ್ದರು.