ಮಡಿಕೇರಿ, ಡಿ.೧೮ : ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಮತ್ತು ಡಾ|| ಹರೀಶ್ ಕುಮಾರ್ ಅವರು ತಾ. ೨೦ ರಂದು ಬೆಳಿಗ್ಗೆ ೧೧ ರಿಂದ ೧ ಗಂಟೆ ವರೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ನಡೆಸಲಿದ್ದಾರೆ.

ಈ ಕಾರ್ಯಾಗಾರಕ್ಕೆ ಕೊಡಗು ಜಿಲ್ಲೆಯ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಜಾಗೃತಿ ಕಾರ್ಯಕ್ರಮ ಮತ್ತು ಸಂವಾದ ನಡೆಯಲಿದೆ. ಬಳಿಕ ಮಧ್ಯಾಹ್ನ ೧ ಗಂಟೆಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳ ಜೊತೆ ಸಂವಾದ/ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.