ಕೂಡಿಗೆ, ಡಿ. ೧೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ವಿವಿಧ ಕಾಮಗಾರಿಗಳು ಸೇರಿದಂತೆ ಕೇಂದ್ರದಲ್ಲಿ ಕಸ ವಿಲೇವಾರಿಗೆ ಸಂಬAಧಿಸಿದAತೆ ನೂತನ ತಂತ್ರಜ್ಞಾನದ ಆಧುನಿಕ ಯಂತ್ರಗಳ ಅಳವಡಿಕೆ ಸಂಬAಧಿಸಿದAತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. ರೂ. ೧ ಕೋಟಿ ೮ ಲಕ್ಷ ವೆಚ್ಚದ ಕಾಮಗಾರಿ ಪ್ರಕ್ರಿಯೆ ಸಿದ್ಧಗೊಂಡು ಯಂತ್ರಗಳ ಅಳವಡಿಕೆಗೆ ಸಂಬAಧಿಸಿದAತೆ ಗುತ್ತಿಗೆದಾರರು ಸಿದ್ಧತೆಯಲ್ಲಿ ತೊಡಗುವುದರ ಜೊತೆಯಲ್ಲಿ ಹಳೆ ಕಸವನ್ನು ಬೇರ್ಪಡಿಸುವ ಕಾರ್ಯ ಶೀಘ್ರದಲ್ಲಿ ಪ್ರಾರಂಭಗೊಳ್ಳುವುದು ಎಂದು ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ಅವರು ತಮ್ಮ ಸಿಬ್ಬಂದಿಗಳೊAದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಮಗಾರಿಯನ್ನು ಕೈಗೊಳ್ಳುವ ಮಾಹಿತಿಯನ್ನು ಗುತ್ತಿಗೆದಾರರಿಂದ ಪಡೆಯಲಾಯಿತು. ೧೫ ವರ್ಷಗಳಿಂದಲೂ ಕಸ ವಿಲೇವಾರಿ ಘಟಕದಿಂದ ಸುತ್ತಮುತ್ತಲಿನ ಪ್ರದೇಶಗಳ ಗ್ರಾಮಸ್ಥರಿಗೆ ದುರ್ವಾಸನೆಯಿಂದಾಗಿ ಸಮಸ್ಯೆಯಾಗಿತ್ತು.

ಅನೇಕ ಬಾರಿ ಗ್ರಾಮಸ್ಥರು ಪುರಸಭೆ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದರು. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಪ್ರಯತ್ನದಿಂದಾಗಿ ಈ ಸಾಲಿನಲ್ಲಿ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ಘಟಕದ ಕೇಂದ್ರದಲ್ಲಿ ಯಾವುದೇ ರೀತಿಯ ವಾಸನೆ ಮತ್ತು ಕಸ ವಿಲೇವಾರಿಗೆ ಸಂಬAಧಿಸಿದAತೆ ನಗರ ಪ್ರದೇಶಗಳಲ್ಲಿ ಅಳವಡಿಕೆ ಮಾಡಿರುವಂತೆ ಆಧುನಿಕ ತಂತ್ರಜ್ಞಾನದ ನೂತನ ಯಂತ್ರಗಳು ಬಳಕೆಯ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಈಗಾಗಲೇ ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಮತ್ತು ಹಿಂದಿನ ಆಡಳಿತದ ಮಂಡಳಿಯ ಮಾರ್ಗದರ್ಶನದಲ್ಲಿ ಕಾಮಗಾರಿ ಭರದಿಂದ ಸಾಗುವುದು ಹಳೆ ಕಸ ವಿಲೇವಾರಿಗೆ ಸಂಬAಧಿಸಿದAತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಭುವನಗಿರಿ ಕಸ ವಿಲೇವಾರಿ ಘಟಕದಲ್ಲಿ ಈಗಾಗಲೇ ಟೆಂಡರ್ ಪಡೆದ ಗುತ್ತಿಗೆದಾರ ನೂತನ ಯಂತ್ರಗಳ ಅಳವಡಿಕೆಗೆ ಸಂಬAಧಿಸಿದAತೆ ಬೃಹತ್ ಯಂತ್ರಗಳನ್ನು ರಾಜ್ಯ ಮತ್ತು ಹೊರ ರಾಜ್ಯಗಳಿಂದ ತಂದು ಅಳವಡಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರೂ. ೭೫ ಲಕ್ಷದಲ್ಲಿ ೪ ನೂತನ ಕಸ ವಿಲೇವಾರಿ ಯಂತ್ರಗಳು ಮತ್ತು ೩೩ ಲಕ್ಷ ವೆಚ್ಚದಲ್ಲಿ ಅದಕ್ಕೆ ಸಂಬAಧಿಸಿದ ಕಸ ಜಾರಣಿ ಮತ್ತು ಹಸಿ ಕಸ, ಒಣ ಕಸ ಮತ್ತು ಪ್ಲಾಸ್ಟಿಕ್‌ಗಳು ವಿಭಾಗವಾಗಲು ಸೇರಿದಂತೆ ನೂತನ ತಂತ್ರಜ್ಞಾನದ ಹಲವಾರು ಯಂತ್ರಗಳ ಅಳವಡಿಕೆ ಮತ್ತು ಯಾವುದೇ ರೀತಿಯ ದುರ್ವಾಸನೆ ಬಾರದ ರೀತಿಯಲ್ಲಿ ಕೈಗೊಳ್ಳುವ ವಿವಿಧ ಯಂತ್ರಗಳ ಅಳವಡಿಕೆಯ ಕಾರ್ಯವು ಕಸ ವಿಲೇವಾರಿ ಘಟಕದಲ್ಲಿ ನಡೆಯಲಿದೆ.

ಇದರ ಜೊತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಮುಖೇನ ಜಿಲ್ಲಾ ನಗರಾಭಿವೃದ್ಧಿ ಕೋಶದ ಮೂಲಕ ಈಗಾಗಲೇ ಜಿಲ್ಲೆಯ ಮಡಿಕೇರಿ, ವೀರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಕಸ ವಿಲೇವಾರಿ ಘಟಕದಲ್ಲಿರುವ ಹಳೆ ಕಸವನ್ನು ತೆಗೆದು ಬೇರೆಡೆಗೆ ಸ್ಥಳಾಂತರಿಸುವ, ಮತ್ತು ಅದರಲ್ಲಿರುವ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸುವುದು ಸೇರಿದಂತೆ ಘಟಕದ ತಡೆಗೋಡೆಯನ್ನು ಹೆಚ್ಚಿಸುವಿಕೆ, ಉತ್ತಮವಾದ ರಸ್ತೆಯ ವ್ಯವಸ್ಥೆ, ವಿವಿಧ ಕಟ್ಟಡಗಳ ನಿರ್ಮಾಣ, ಅದರ ಅಭಿವೃದ್ಧಿಗೆ ಪೂರಕವಾಗುವಂತೆ ಜಿಲ್ಲಾಧಿಕಾರಿಗಳ ಮೂಲಕ ರೂ. ೧೨ ಕೋಟಿ ವೆಚ್ಚದ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಆಯಾ ಕಸ ವಿಲೇವಾರಿ ಘಟಕಗಳಲ್ಲಿ ಕಾಮಗಾರಿ ಆರಂಭಗೊಳ್ಳುವ ಪ್ರಕ್ರಿಯೆಆರಂಭಗೊAಡಿದೆ.

ಇದರಿAದಾಗಿ ಬಹುದಿನಗಳ ಬೇಡಿಕೆಯಾಗಿದ್ದ ಘಟಕದ ಸಮೀಪದಲ್ಲಿರುವ ಗ್ರಾಮಗಳ ರೈತರ ಮತ್ತು ಗ್ರಾಮಸ್ಥರ ಮನವಿಗೆ ಶಾಶ್ವತ ಪರಿಹಾರ ಸಿಗುವಂತಾಗುತ್ತಿದೆ. ಎಂದು ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆಯ ಆರೋಗ್ಯಾಧಿಕಾರಿ ಉದಯಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.

- ಕೆ.ಕೆ. ನಾಗರಾಜಶೆಟ್ಟಿ