ಕುಶಾಲನಗರ, ಡಿ. ೧೯: ಕುಶಾಲನಗರ ಸಮೀಪದ ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಕೊಪ್ಪ - ಗುಡ್ಡೇನಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿರುವ ಶಿಬಿರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಚಾಲನೆ ನೀಡಿದರು.

ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಫಾ. ಎಬಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತ್ ಮಾತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ. ಸಿಬಿಚಿಯನ್ ಪೌಲ್, ಉಪ ಪ್ರಾಂಶುಪಾಲ ಫಾ. ಟಿಟ್ಟೋ ಥಾಮಸ್, ಬೈಲುಕುಪ್ಪೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಡಿ.ಆರ್. ರವಿಕುಮಾರ್, ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಪಾಲ್ಗೊಂಡು ಮಾತನಾಡಿ, ಶುಭ ಕೋರಿದರು.

ಶಿಬಿರದ ಅಧಿಕಾರಿ ಹೆಚ್.ಆರ್. ದಿನೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಏಳು ದಿನಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸಿದರು. ಪ್ರತಿನಿತ್ಯ ಸ್ವಚ್ಛತಾ ಕಾರ್ಯಕ್ರಮ, ಸಾಂಸ್ಕೃತಿಕ ಸ್ಪರ್ಧೆಗಳು, ಕ್ರೀಡಾ ಚಟುವಟಿಕೆ, ಉಪನ್ಯಾಸ ಕಾರ್ಯಕ್ರಮಗಳು ಸೇರಿದಂತೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಶಿಬಿರದ ನಿರ್ವಾಹಕರಾದ ಬಿ.ಡಿ. ಶೃತಿ, ಕೀರ್ತನ್ ಕುಟ್ಟಪ್ಪ ಮತ್ತು ಕಾಲೇಜಿನ ಅಧ್ಯಾಪಕ ವೃಂದ ಮತ್ತು ಶಿಬಿರಾರ್ಥಿಗಳು ಇದ್ದರು.