ಕೂಡಿಗೆ, ಡಿ. ೧೯: ಕಾಡಾನೆ ಉಪಟಳದಿಂದ ಭತ್ತದ ಬೆಳೆಗೆ ಹಾನಿ ಸಂಭವಿಸಿದ ಘಟನೆ ಇಲ್ಲಿಗೆ ಸಮೀಪದ ಹುದುಗೂರಿನ ಕಾಳಿದೇವನ ಹೊಸೂರು ಗ್ರಾಮದಲ್ಲಿ ಸಂಭವಿಸಿದೆ.
ಕಳೆದ ಎರಡು ದಿನಗಳಿಂದ ಯಡವನಾಡು ಮೀಸಲು ಅರಣ್ಯ ಪ್ರದೇಶದಿಂದ ಲಗ್ಗೆಯಿಡುತ್ತಿರುವ ಕಾಡಾನೆಗಳು ಫಸಲು ನಾಶಗೊಳಿಸುತ್ತಿವೆ. ಗ್ರಾಮ ರೈತರಾದ ರಾಣಿ, ನಾರಾಯಣ ಎಂಬವರಿಗೆ ಸೇರಿದ ಭತ್ತದ ಗದ್ದೆಗಳಿಗೆ ದಾಳಿ ಮಾಡಿ ಕಟಾವು ಹಂತಕ್ಕೆ ಬಂದಿದ್ದ ಅಪಾರ ಪ್ರಮಾಣದ ಭತ್ತದ ಬೆಳೆಯನ್ನು ತುಳಿದು, ತಿಂದು ನಷ್ಟ ಪಡಿಸಿವೆ.
ಸ್ಥಳಕ್ಕೆ ಹುದುಗೂರು ಉಪ ವಲಯ ಅರಣ್ಯಾಧಿಕಾರಿ, ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.