ಸಿದ್ದಾಪುರ, ಡಿ. ೧೯: ೨೦೨೪-೨೫ನೇ ಸಾಲಿನ ಲೆಕ್ಕಪರಿಶೋಧನೆ ಸಭೆ ಗ್ರಾಮಸ್ಥರ ಅನುಪಸ್ಥಿತಿಯಲ್ಲಿ ನಡೆಯಿತು. ವೈಯಕ್ತಿಕ ಸೌಲಭ್ಯಗಳನ್ನು ಪಡೆದುಕೊಂಡ ಗ್ರಾಮಸ್ಥರು ಲೆಕ್ಕ ಪರಿಶೋಧನೆ ಸಭೆಗೆ ಹಾಜರಾಗದೆ ಇರುವುದು ಸಭೆ ಪರಿಪೂರ್ಣವಾಗಲ್ಲ, ಯೋಜನೆಯ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರೂ ಕೇಳುವವರಿಲ್ಲದಂತಾಗಿದೆ ಎಂದು ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಅಧಿಕಾರಿ ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದಾಪುರ ಗ್ರಾಮ ಪಂಚಾಯಿತಿಯ ಲೆಕ್ಕ ಪರಿಶೋಧನೆ ಸಭೆಯಲ್ಲಿ ಮಾಹಿತಿ ನೀಡಿ ಮಾತನಾಡಿದÀ ಅವರು, ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬಂಜರು ಭೂಮಿಯನ್ನು ಕೃಷಿ ಭೂಮಿಯನ್ನಾಗಿಸಲು ರೂ ಐದು ಲಕ್ಷ ಅನುದಾನವಿದ್ದು, ಕೃಷಿಕರು ಸದುಪಯೋಗಪಡಿಸಿಕೊಳ್ಳಬೇಕು.
ಅಲ್ಲದೆ ಕೋಳಿ, ಹಸು ಸಾಕಾಣಿಕೆಗೆ ಗೂಡು ನಿರ್ಮಾಣಕ್ಕೆ ಅನುದಾನ ಲಭ್ಯವಿದೆ. ಆಸಕ್ತರು ಸಂಬAಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಬೇಕೆAದರು.
ಸಭೆಯಲ್ಲಿ ಗ್ರಾಮಸ್ಥರ ಅನುಪಸ್ಥಿತಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ಪ್ರಚಾರಪಡಿಸದೇ ಇರುವುದು ಮುಖ್ಯ ಕಾರಣವಾಗಿದೆ ಎಂದು ಸಭೆಯಲ್ಲಿದ್ದ ಕೆಲ ಗ್ರಾಮಸ್ಥರು ದೂರಿದರು.
ಇದೇ ಸಂದÀರ್ಭ ೨೦೨೪-೨೫ ನೇ ಸಾಲಿನಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಗಳ ಮಾಹಿತಿಯನ್ನು ನೀಡಲಾಯಿತು.
ಈ ಸಂಧರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಪ್ರೇಮಾ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ಪಿಡಿಓ ಆಶಾ ಕುಮಾರಿ, ನೋಡಲ್ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಆಶಾ ಹಾಗೂ ಗ್ರಾ.ಪಂ ಸದಸ್ಯರು ಹಾಜರಿದ್ದರು.