ಮಡಿಕೇರಿ , ಡಿ. ೧೯: ಸುಂಟಿಕೊಪ್ಪ ಸಮೀಪದ ಉಲುಗುಲಿ ಗ್ರಾಮದ ಕಾಫಿ ಕಣವೊಂದರಲ್ಲಿ ಹುಲಿ ಹೆಜ್ಜೆ ಕಂಡು ಬಂದಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಗ್ರಾಮದ ಎಂಕನ ಜೋತು ಕುಮಾರ್ ಅವರ ತೋಟದ ಕಾಫಿ ಒಣಗಿಸುವ ಕಣದಲ್ಲಿ ಹುಲಿ ಹೆಜ್ಜೆ ಕಂಡು ಬಂದಿದೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.