ಪೊನ್ನಂಪೇಟೆ, ಡಿ. ೨೦: ಅಯ್ಯಪ್ಪ ಮಾಲಾಧಾರಿಯಾಗಿದ್ದ ವಿದ್ಯಾರ್ಥಿನಿಯ ಮಾಲೆಯನ್ನು ಶಾಲಾ ಮುಖ್ಯಶಿಕ್ಷಕಿ ಬಿಚ್ಚಿಸಿದ್ದು, ಘಟನೆಗೆ ಹಿಂದೂ ಪರ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಪೊನ್ನಂಪೇಟೆ ಸಂತ ಅಂತೋಣಿ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಅಯ್ಯಪ್ಪ ಮಾಲೆಯನ್ನು ಧರಿಸಿ ಬಂದ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕಿ ಬಲವಂತವಾಗಿ ಮಾಲೆ ಬಿಚ್ಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ದೂರು ಬಂದ ಹಿನ್ನೆಲೆ ಹಿಂದೂ ಸಂಘಟನೆಗಳ ಮುಖಂಡರು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ಶಾಲೆಯಲ್ಲಿ ವಿವಿಧ ಧರ್ಮಕ್ಕೆ ಸೇರಿದ ಸುಮಾರು ೭೦೦ ಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪ್ರತಿದಿನ ಒಂದು ಧರ್ಮಕ್ಕೆ ಸಂಬAಧಿಸಿದ ಪ್ರಾರ್ಥನೆ ಮಾಡಿಸುತ್ತಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ ಪ್ರಮುಖರು, ಶಾಲೆಯಲ್ಲಿ ಹಿಂದೂ ಧರ್ಮದ ಹಬ್ಬ ಹರಿದಿನಗಳ ರಜೆಗಳನ್ನು ಕಡಿತ ಮಾಡುತ್ತಿರುವ ಬಗ್ಗೆಯೂ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಪ್ರಶ್ನಿಸಿದರು.

ಈ ವೇಳೆ ಆಚಾತುರ್ಯದಿಂದ ಈ ಘಟನೆ ಸಂಭವಿಸಿದ್ದು, ಇನ್ನು ಮುಂದಕ್ಕೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸುವುದಾಗಿ ಹೇಳಿದರು.

ಮುಖಂಡರುಗಳಾದ ಮುದ್ದಿಯಡ ಮಂಜು ಗಣಪತಿ, ಮತ್ರಂಡ ಕಬೀರ್ ದಾಸ್, ಆಲೇಮಾಡ ನವೀನ್, ಸುಳ್ಳಿಮಾಡ ಸಂಪತ್, ಅಡ್ಡಂಡ ನಿಲನ್, ಪುತ್ತಾಮನೆ ಅನಿಲ್ ಪ್ರಸಾದ್, ವಿನು ಕೆ.ಬಿ ಹಾಗೂ ರಾಷ್ಟಿçÃಯ ಸ್ವಯಂಸೇವಕ ಸಂಘ, ಹಿಂದೂ ಜಾಗರಣ ವೇದಿಕೆ, ಬಜರಂಗದಳದ ಕಾರ್ಯಕರ್ತರು ಹಾಜರಿದ್ದರು.