ಪೊನ್ನAಪೇಟೆ, ಡಿ.೨೦: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಫ್ಲೆöÊಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್ ಸಹ ಪ್ರಾಯೋಜಕತ್ವದಲ್ಲಿ ವಿ. ಬಾಡಗದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು ಐದು ದಿನಗಳ ಕಾಲ ಜರುಗಲಿರುವ ೪ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ತಾ. ೨೧ ರಿಂದ (ಇಂದಿನಿAದ) ಆರಂಭಗೊಳ್ಳಲಿದೆ.

ದಕ್ಷಿಣ ಕೊಡಗಿನ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಐನ್‌ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಆಯೋಜಿಸಲಾಗಿರುವ ಪಂದ್ಯಾವಳಿಗಾಗಿ ಈಗಾಗಲೇ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿರುವುದಾಗಿ ವಿ. ಬಾಡಗ ಹೈಫ್ಲೆöÊಯರ್ಸ್ ಸಂಸ್ಥೆಯ ಅಧ್ಯಕ್ಷ ಅಮ್ಮಣಿಚಂಡ ರಂಜು ಪೂಣಚ್ಚ ಅವರು ತಿಳಿಸಿದ್ದಾರೆ.

ಪಂದ್ಯಾವಳಿಗಾಗಿ ವಿ. ಬಾಡಗದ ಜಿಎಂಪಿ ಶಾಲಾ ಮೈದಾನವನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದೆ. ಪ್ರತಿವರ್ಷವೂ ಹೈಫ್ಲೆöÊಯರ್ಸ್ ಸಂಸ್ಥೆಯೇ ಈ ಮೈದಾನವನ್ನು ನಿರ್ವಹಣೆ ಮಾಡುತ್ತಿದ್ದು, ಇದೀಗ ಸುಸಜ್ಜಿತ ಹಾಕಿ ಮೈದಾನವಾಗಿ ರೂಪಗೊಳಿಸಲಾಗಿದೆ. ಮೈದಾನದ ಮಾರ್ಕಿಂಗ್ ಕೆಲಸವೂ ಪೂರ್ಣಗೊಂಡಿದೆ. ಇದಕ್ಕಾಗಿ ಕಳೆದ ೨೩ ದಿನಗಳಿಂದ ಶ್ರಮಿಸಲಾಗಿದೆ ಎಂದು ವಿವರಿಸಿದ್ದಾರೆ. ಬೆಳಿಗ್ಗೆ ೧೦ ಗಂಟೆಗೆ ಜರುಗಲಿರುವ ಕಾರ್ಯಕ್ರಮದಲ್ಲಿ ಭಾರತ ಹಾಕಿ ತಂಡದ ಮಾಜಿ ಆಟಗಾರರಾದ ಒಲಿಂಪಿಯನ್ ಬಾಳೆಯಡ ಕಾಳಯ್ಯ ಸುಬ್ರಮಣಿ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ನಂತರ ಹೈಫ್ಲೆöÊಯರ್ಸ್ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷ ಮಳವಂಡ ಗಿರೀಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ, ಹಾಕಿ ಕೂರ್ಗ್ ಅಧ್ಯಕ್ಷÀ ಪಳಂಗAಡ ಲವ ಕುಮಾರ್, ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮುಣಿಚಂಡ ರವಿ ಉತ್ತಪ್ಪ, ಹೈಫ್ಲೆöÊಯರ್ಸ್ ಸಂಸ್ಥೆಯ ಅಧ್ಯಕ್ಷ ಅಮ್ಮುಣಿಚಂಡ ರಂಜು ಪೂಣಚ್ಚ, ವಿ. ಬಾಡಗ ಜಿಎಂಪಿ ಶಾಲಾ ಮುಖ್ಯ ಶಿಕ್ಷಕಿ ಕೆ.ಸಿ. ಗೀತಾಂಜಲಿ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಪಂದ್ಯಾವಳಿಯ ಫೈನಲ್ಸ್ ಹಾಗೂ ಸಮಾರೋಪ ಸಮಾರಂಭ ತಾ. ೨೫ರಂದು ನಡೆಯಲಿದೆ. - ರಫೀಕ್ ತೂಚಮಕೇರಿ