ಮಡಿಕೇರಿ, ಡಿ. ೨೦: ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗಾಗಿ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು ಎಂದು ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಕೆ. ಮತ್ತು ಡಾ|| ಹರೀಶ್ ಕುಮಾರ್ ಪ್ರತಿಪಾದಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಮಾಹಿತಿ ಆಯುಕ್ತರು ಅಧಿಕಾರಿಗಳಿಗೆ ಪಾಠ ಮಾಡಿದರು.

ಮಾಹಿತಿ ಹಕ್ಕು ಕಾಯ್ದೆಯು ಸರಳವಾಗಿದ್ದರೂ ಸಹ ಗಂಭೀರವಾಗಿದೆ. ಅದನ್ನು ಅರ್ಥಮಾಡಿಕೊಂಡು ಕಚೇರಿಗೆ ಸಲ್ಲಿಕೆಯಾದ ಅರ್ಜಿಗೆ ನಿಯಮಾನುಸಾರ ೩೦ ದಿನದೊಳಗೆ ಮಾಹಿತಿ ಒದಗಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಉತ್ತರದಾಯಿತ್ವ ಹೊಂದಿರಬೇಕು. ಜೊತೆಗೆ ಪಾರದರ್ಶಕತೆ ಇದ್ದಲ್ಲಿ ವಿಚಲಿರಾಗುವ ಅಗತ್ಯವಿಲ್ಲ. ಆ ದಿಸೆಯಲ್ಲಿ ಪ್ರಾಮಾಣಿಕತೆ ಇರಬೇಕು ಎಂದು ಬದ್ರುದ್ದೀನ್ ಅವರು ಒತ್ತಿ ಹೇಳಿದರು.

ಎಲ್ಲರೂ ಸಹ ಮನುಷ್ಯರೇ ಆಗಿದ್ದು, ತಪ್ಪುಗಳು ಆಗುತ್ತವೆ. ಅದನ್ನು ತಿದ್ದಿ ನಡೆಯುವುದು ಅತ್ಯಗತ್ಯ. ಅದನ್ನು ಬಿಟ್ಟು ಸುಳ್ಳು ಮಾಹಿತಿ ನೀಡಿ ಪೇಚಿಗೆ ಸಿಲುಕಬಾರದು. ಸತ್ಯದ ಮಾಹಿತಿ ನೀಡಿದ್ದಲ್ಲಿ ಕ್ಷಮೆಗೂ ಅರ್ಹರಿರುತ್ತಾರೆ ಎಂಬುದನ್ನು ಮರೆಯಬಾರದು. ಕೆಡಿಪಿ ಸಭೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳ ಸಲ್ಲಿಕೆ, ವಿಲೇವಾರಿ ಮತ್ತಿತರ ಸಂಬAಧ ಚರ್ಚಿಸಿದ್ದಲ್ಲಿ ಸಮಸ್ಯೆಯನ್ನು ಜಿಲ್ಲಾಮಟ್ಟದಲ್ಲಿಯೇ ಪರಿಹರಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರ ಜೊತೆ ಯಾವುದೇ ಕಾರಣಕ್ಕೂ ಕರೆ ಮಾಡಿ ಮಾತನಾಡಬಾರದು. ಅಡ್ಡದಾರಿ ಹಿಡಿಯಬಾರದು. ಮಾಹಿತಿ ಹಕ್ಕು ಕಾಯ್ದೆಯಡಿ ರಾಷ್ಟçದಲ್ಲಿ ೬೦ ಲಕ್ಷ ಅರ್ಜಿಗಳು ಬಾಕಿ ಇವೆ. ರಾಜ್ಯದಲ್ಲಿ ೬ ಲಕ್ಷ ಅರ್ಜಿಗಳು, ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಹಾಗೆಯೇ ಜಿಲ್ಲೆಯಲ್ಲಿ ೩೮ ಸಾವಿರ ಅರ್ಜಿಗಳು ಇದ್ದು, ರಾಜ್ಯದಲ್ಲಿ ಕೊಡಗು ಜಿಲ್ಲೆ ಕೊನೆ ಸ್ಥಾನದಲ್ಲಿದೆ ಎಂದರು.

ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಮಾತನಾಡಿ, ಸರ್ಕಾರಿ ನೌಕರರನ್ನು ಸಾರ್ವಜನಿಕರು ನೋಡುವ ದೃಷ್ಟಿ, ಸರ್ಕಾರಿ ನೌಕರರು ಸಮಾಜವನ್ನು ನೋಡುವ ದೃಷ್ಟಿ ಎರಡನ್ನು ಗಮನಿಸಬೇಕು.. ಸ್ವೀಡನ್ ದೇಶದಲ್ಲಿ ೧೭೭೬ ರಲ್ಲಿಯೇ ಮಾಹಿತಿ ಹಕ್ಕು ಕಾಯ್ದೆ ಜಾರಿಗೊಳಿಸಲಾಗಿದೆ. ಕರ್ನಾಟಕ ಇಡೀ ದೇಶದಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿದ ಪ್ರಥಮ ರಾಜ್ಯವಾಗಿದೆ ಎಂದು ತಿಳಿಸಿದರು.

ಮಾಹಿತಿ ಹಕ್ಕು ಅಧಿನಿಯಮವು ೨೦೦೫ ರಲ್ಲಿ ಜಾರಿಗೆ ಬಂದಿದ್ದು, ಉತ್ತಮ ಆಡಳಿತ, ದಕ್ಷತೆ ಮತ್ತು ಪಾರದರ್ಶಕತೆ ತರುವುದು ಉದ್ದೇಶವಾಗಿದೆ ಎಂದರು.

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಕೆಯಾದ ೩೦ ದಿನದೊಳಗೆ ಮಾಹಿತಿ ನೀಡಬೇಕು. ಮಾಹಿತಿ ನೀಡದಿದ್ದಲ್ಲಿ ೨೫ ಸಾವಿರ ದಂಡ ವಿಧಿಸಲಾಗುತ್ತದೆ. ಜೊತೆಗೆ ತಪ್ಪು ಮಾಡಿದ್ದಲ್ಲಿ ೫ ವರ್ಷ ಜೈಲು ಶಿಕ್ಷೆ ಇದೆ. ಆದ್ದರಿಂದ ದಾಖಲೆ ನಿರ್ವಹಣೆ ಅತೀ ಮುಖ್ಯ ಎಂದು ಹೇಳಿದರು.

ಅರ್ಜಿ ಸಲ್ಲಿಸಿದವರು ಬಿಪಿಎಲ್ ಕಾರ್ಡ್ದಾರರಾಗಿದ್ದರೆ ೧೦೦ ಪುಟಗಳವರೆಗೆ ಉಚಿತವಾಗಿ ಮಾಹಿತಿ ನೀಡಬೇಕು. ಉಳಿದಂತೆ ಪ್ರತಿ ಪುಟಕ್ಕೆ ೨ ರೂ.ನಂತೆ ಶುಲ್ಕ ಪಾವತಿಸಿಕೊಂಡು ಮಾಹಿತಿ ಒದಗಿಸಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ಜನರು ಹೇಗೆ ಬಳಸುತ್ತಿದ್ದಾರೆ ಎಂಬುದನ್ನು ಗಮನಿಸಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ವೈಯಕ್ತಿಕ ವಿವರ ಬೇಕಿಲ್ಲ. ಮಾಹಿತಿ ಹಕ್ಕು ಕಾಯ್ದೆ ಬಲಪಡಿಸುವುದು, ಜೊತೆಗೆ ದುರುಪಯೋಗ ತಡೆಯಲು ಆಯೋಗ ಮುಂದಾಗಿದೆ ಎಂದರು.

ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮಾತನಾಡಿ, ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡ ಬರುತ್ತದೆ ಎಂದು ಭಾವಿಸದೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಿದೆ ಎಂದು ತಿಳಿದುಕೊಳ್ಳಬೇಕು. ಸಾಧ್ಯವಿದ್ದಲ್ಲಿ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಕಂದಾಯ ಇಲಾಖೆಗೆ ಸಂಬAಧಿಸಿದAತೆ ಭೂಸುರಕ್ಷಾ ಯೋಜನೆಯಡಿ ಡಿಜಿಟಲೀಕರಣವಾಗುತ್ತಿದ್ದು, ರಾಜ್ಯದಲ್ಲಿ ಕೊಡಗು ಪ್ರಥಮ ಜಿಲ್ಲೆಯಾಗಿದೆ. ಮುಂದಿನ ದಿನಗಳಲ್ಲಿ ಶೇಕಡಾವಾರು ಪ್ರಗತಿ ಸಾಧಿಸಲು ಮುಂದಾಗಲಾಗಿದೆ ಎಂದರು.

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವವರು ಮಾಹಿತಿ ಹಕ್ಕು ಕಾರ್ಯಕರ್ತ ಎಂದು ಬಿಂಬಿಸಿಕೊಳ್ಳುತ್ತಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಬದ್ರುದ್ದೀನ್ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವವರು ಅವರೊಬ್ಬ ಅರ್ಜಿದಾರರೇ ಹೊರತು ಯಾವುದೇ ವಿಶೇಷ ಪ್ರಾಧಾನ್ಯತೆ ಇಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಮಾಹಿತಿ ಹಕ್ಕು ಕಾಯ್ದೆ ಸಂಬAಧಿಸಿದAತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ವಿಷಯ ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.