ಕುಶಾಲನಗರ, ಡಿ. ೨೦: ಕೊಡಗು ಜಿಲ್ಲೆಗೆ ಆಗಮಿಸಿದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಜನಜಾಗೃತಿ ರಥ ಕುಶಾಲನಗರಕ್ಕೆ ಆಗಮಿಸಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕುಶಾಲನಗರ ಜ್ಞಾನಭಾರತಿ ಪ್ರೌಢಶಾಲೆಯಲ್ಲಿ ಸ್ಥಳೀಯ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆಯಿಂದ ಉಂಟಾಗುವ ಮಾರಕ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಪ್ರಾಂತ ಆರ್‌ಎಸ್‌ಎಸ್ ಪ್ರಚಾರಕ ನಂದೀಶ್, ಜಿಲ್ಲಾ ಕಾರ್ಯವಾಹಕ ರವಿ, ಲಯನ್ಸ್ ಕ್ಲಬ್ ಅಧ್ಯಕ್ಷ ನಾರಾಯಣ ಮತ್ತು ಶಾಲೆಯ ಮುಖ್ಯಸ್ಥರುಗಳು ಪಾಲ್ಗೊಂಡಿದ್ದರು.
ನಂತರ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಆಯೋಜಕರು ಮಾದಕ ವಸ್ತು ಸೇವನೆಯಿಂದ ಮನಸ್ಸು ಹಾಗೂ ದೇಹದ ಆರೋಗ್ಯ ಕೆಡುವ ಬಗ್ಗೆ ಹಾಗೂ ಅದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಈ ಸಂದರ್ಭ ಸ್ಥಳೀಯ ಪ್ರಮುಖರಾದ ನವನೀತ್ ಪೊನ್ನೇಟಿ, ಹರೀಶ್, ಭರತ್ ಮಾಚಯ್ಯ, ಪ್ರಶಾಂತ್, ದಿನೇಶ್, ಪ್ರೌಢಶಾಲೆ ಮುಖ್ಯೋಪಾಧ್ಯಾಯ ಮಂಜುನಾಥ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆÀ ಶಾಂತಿ, ಮತ್ತಿತರರು ಇದ್ದರು.