ಪೊನ್ನಂಪೇಟೆ, ಡಿ.೨೧: ಇಡೀ ರಾಜ್ಯದಲ್ಲೇ ಅತಿ ಚಿಕ್ಕ ಜಿಲ್ಲೆಯಾಗಿರುವ ಕೊಡಗು ರಾಷ್ಟçಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಲ್ಲೂ ಕೊಡಗು ಜಿಲ್ಲೆಗೆ ತನ್ನದೇ ಆದ ಹೆಸರಿದೆ. ಕೊಡಗಿನ ಖ್ಯಾತಿಯನ್ನು ಅಂತರರಾಷ್ಟಿçÃಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಪಿ. ಸುಜಾ ಕುಶಾಲಪ್ಪ ಮೆಚ್ಚುಗೆಯ ನುಡಿಗಳನ್ನಾಡಿದರು.

ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್ ಅವರ ಸಹ ಪ್ರಾಯೋಜಕತ್ವದಲ್ಲಿ ವಿ. ಬಾಡಗದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಾನುವಾರ ನಡೆದ ೪ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಫ್ಲೆöÊಯರ್ಸ್ ಕಪ್-೨೦೨೫ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆ ದೇಶದ ಕ್ರೀಡಾ ಕ್ಷೇತ್ರದ ಬೆಳವಣಿಗೆಯಲ್ಲಿ ಗಣನೀಯವಾದ ಪಾತ್ರ ವಹಿಸಿದೆ ಎಂದರಲ್ಲದೆ, ದೇಶದ ಕ್ರೀಡಾ ಇತಿಹಾಸದಿಂದ ಕೊಡಗು ಜಿಲ್ಲೆಯ ಕ್ರೀಡಾ ಸಾಧನೆಯನ್ನು ಹೊರತುಪಡಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಪಾಂಡAಡ ಕುಟ್ಟಪ್ಪ ಅವರು ೧೯೯೭ರಲ್ಲಿ ಹುಟ್ಟು ಹಾಕಿದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಪರಿಕಲ್ಪನೆ ಇಂದು ಕೊಡವರಲ್ಲಿ ಹೆಮ್ಮರವಾಗಿ ಬೆಳೆದಿದೆ. ಈ ಕೌಟುಂಬಿಕ ಪಂದ್ಯಾವಳಿಗಳು ಇಂದು ಕೇವಲ ಹಾಕಿ ಕ್ರೀಡೆಗೆ ಮಾತ್ರ ಸೀಮಿತವಾಗದೆ ಎಲ್ಲಾ ಕ್ರೀಡೆಗಳಿಗೂ ವ್ಯಾಪಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದ ಸುಜಾ ಕುಶಾಲಪ್ಪ ಅವರು, ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ ಕೊಡವರು ಇಂದು ಜನಸಂಖ್ಯೆಯಲ್ಲಿ ಕ್ಷೀಣಿಸುತ್ತಿದ್ದಾರೆ. ಕೊಡವ ಸಮುದಾಯಕ್ಕೆ ಜನಸಂಖ್ಯೆ ಕೊರತೆ ಎದುರಾದರೆ ಭವಿಷ್ಯದಲ್ಲಿ ಕೊಡವರ ಅಸ್ತಿತ್ವಕ್ಕೆ ಮಾರಕವಾಗಲಿದೆ. ಆದ್ದರಿಂದ ಕೊಡವರು ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಲು ಚಿಂತಿಸಬೇಕು ಎಂದು ಸಲಹೆ ನೀಡಿದರು. ವಿ. ಬಾಡಗ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದ ಅಭಿವೃದ್ಧಿಗಾಗಿ ತಮ್ಮ ಸರಕಾರಿ ನಿಧಿಯಿಂದ ರೂ. ೩ ಲಕ್ಷ ಅನುದಾನ ನೀಡುವುದಾಗಿ ಇದೇ ಸಂದರ್ಭದಲ್ಲಿ ಸುಜಾ ಕುಶಾಲಪ್ಪ ಅವರು ಭರವಸೆ ನೀಡಿದರು.

ದ. ಕೊಡಗಿನ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬ ತಂಡಗಳಿಗಾಗಿ ಐದು ದಿನಗಳ ಕಾಲ ನಡೆಯಲಿರುವ ಈ ಪಂದ್ಯಾವಳಿಯನ್ನು ಮೈದಾನದಲ್ಲಿ ಚೆಂಡು ತಳ್ಳುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿದ ಭಾರತ ಹಾಕಿ ತಂಡದ ಮಾಜಿ ಆಟಗಾರರಾದ ಒಲಿಂಪಿಯನ್, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಬಾಳೆಯಡ ಕಾಳಯ್ಯ ಸುಬ್ರಮಣಿ, ದೇಶಸೇವೆ, ಕೃಷಿ ಮತ್ತು ಕ್ರೀಡೆಯನ್ನು ಹಿಂದಿನಿAದಲೂ ತಮ್ಮ ರಕ್ತಗತವಾಗಿ ಮೈಗೂಡಿಸಿಕೊಂಡಿರುವ ಕೊಡವರು, ಈ ಮೂರು ಕ್ಷೇತ್ರಗಳ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅದರಲ್ಲೂ ದೇಶಸೇವೆ ಮತ್ತು ಕ್ರೀಡೆಯ ಅಭಿವೃದ್ಧಿಯಲ್ಲಿ ಕೊಡಗು ಜಿಲ್ಲೆ ನಿರ್ವಹಿಸಿದ ಪಾತ್ರವನ್ನು ರಾಜ್ಯದ ಬೇರೆ ಯಾವುದೇ ಜಿಲ್ಲೆ ನಿರ್ವಹಿಸಿಲ್ಲ. ಇದನ್ನು ಸರಕಾರ ಪ್ರತ್ಯೇಕವಾಗಿ ಗುರುತಿಸು ವಂತಾಗಬೇಕು ಎಂದರಲ್ಲದೆ, ಯಾವುದೇ ಅಡೆತಡೆಗಳಿದ್ದರೂ ಜಿಲ್ಲೆಯಲ್ಲಿ ಕ್ರೀಡೆಗೆ ಹಿನ್ನಡೆಯಾಗಲು ಅವಕಾಶ ನೀಡಬಾರದು ಎಂದು ಹೇಳಿದರು.ಮತ್ತೋರ್ವ ಮುಖ್ಯ ಅತಿಥಿಗಳಾಗಿದ್ದ ಹಾಕಿ ಕೂರ್ಗ್ ಅಧ್ಯಕ್ಷರಾದ ೪ಆರನೇ ಪುಟಕ್ಕೆ

ಪಳಂಗAಡ ಲವ ಕುಮಾರ್ ಮಾತನಾಡಿ, ಶಾಲಾ ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ಉತ್ತೇಜಿಸುವ ಕೆಲಸ ಕೊಡಗಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ. ಅದರಲ್ಲೂ ವಿಶೇಷವಾಗಿ ಹಾಕಿ ಕ್ರೀಡೆಯಲ್ಲಿ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಬೇಕು. ವಿದ್ಯಾರ್ಥಿಗಳನ್ನು ಪ್ರಾಥಮಿಕ ಹಂತದಿAದಲೇ ಕ್ರೀಡಾ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗುವಂತೆ ಮಾಡಿದಲ್ಲಿ ಶ್ರೇಷ್ಠ ಕ್ರೀಡಾಪಟು ರೂಪುಗೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಮಕ್ಕಳ ಬೇಸಿಗೆ ತರಬೇತಿ ಶಿಬಿರಗಳನ್ನು ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಆಯೋಜಿಸಬೇಕು. ಜೊತೆಗೆ ಶಾಲಾ ವಿದ್ಯಾರ್ಥಿಗಳಿಗಾಗಿ ಹಾಕಿ ಪಂದ್ಯಾವಳಿಗಳನ್ನು ನಿರಂತರವಾಗಿ ಸಂಘಟಿಸಬೇಕು ಎಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿದ್ದ ವಿ. ಬಾಡಗ ಜಿಎಂಪಿ ಶಾಲಾ ಮುಖ್ಯ ಶಿಕ್ಷಕಿ ಕೆ.ಸಿ. ಗೀತಾಂಜಲಿ ಸಮಾರಂಭದಲ್ಲಿ ಮಾತನಾಡಿದರು. ಹೈಫ್ಲೆöÊಯರ್ಸ್ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷರಾದ ಮಳವಂಡ ಗಿರೀಶ್ ಮುದ್ದಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಬಿ.ಶೆಟ್ಟಿಗೇರಿ ಗ್ರಾ. ಪಂ. ಅಧ್ಯಕ್ಷ ಕೊಲ್ಲಿರ ಬೋಪಣ್ಣ, ಗ್ರಾಮದ ಪ್ರಮುಖರಾದ ಕಂಜಿತAಡ ಗಿಣಿ ಮೊಣ್ಣಪ್ಪ, ಪಂದ್ಯಾವಳಿಯ ನಿರ್ದೇಶಕರಾದ ಕುಪ್ಪಂಡ ದಿಲನ್ ಬೋಪಣ್ಣ ಮೊದಲಾದವರು ಉಪಸ್ಥಿತರಿದ್ದರು. ಪ್ರಥಮಾರ್ಧದ ಬಿಡುವಿನಲ್ಲಿ ಕುತ್ತುನಾಡು ಮಹಿಳಾ ಕೂಟದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಳುವಂಗಡ ಲೋಹಿತ್ ಭೀಮಯ್ಯ ಪ್ರಾರ್ಥಿಸಿದರು. ಹೈಪ್ಲೈಯರ್ಸ್ ಸಂಸ್ಥೆಯ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ವೀಕ್ಷಕ ವಿವರಣೆಗಾರರಾದ ಮಾಳೇಟಿರ ಶ್ರೀನಿವಾಸ್ ಕಾರ್ಯಕ್ರಮ ನಿರ್ವಹಿಸಿದರು.

ಚಿತ್ರ ವರದಿ: ರಫೀಕ್ ತೂಚಮಕೇರಿ