ಸುಂಟಿಕೊಪ್ಪÀ, ಡಿ. ೨೧: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ವತಿಯಿಂದ ಮುಕೋಡ್ಲು ಹಾಗೂ ಹಮ್ಮಿಯಾಲ ಗ್ರಾಮಸ್ಥರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ಪ್ರತಿ ಗ್ರಾಮದಿಂದ ಹೆಣ್ಣುಮಕ್ಕಳ ರಕ್ಷಣೆಯಾಗಬೇಕು ಹಾಗೂ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣವಂತರಾಗಬೇಕು. ಅಲ್ಲದೆ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಬೇಕು, ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗೆ ಸಹಕರಿಸಲು ಇಲಾಖೆ ಮತ್ತು ಸಮುದಾಯ ಒಂದಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಸಖಿ ಓನ್ ಸ್ಟಾಫ್ ಸೆಂಟರ್ ಕುರಿತು ಮಾಹಿತಿ ನೀಡಿದ ಸಖಿ ಕೇಂದ್ರವು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಐದು ಸೇವೆಗಳಾದ ವೈದ್ಯಕೀಯ ನೆರವು, ಕಾನೂನು ನೆರವು, ಆಪ್ತ ಸಮಾಲೋಚನೆ, ತಾತ್ಕಾಲಿಕ ಆಶ್ರಯ ಹಾಗೂ ಪೊಲೀಸ್ ನೆರವು ನೀಡುತ್ತದೆ, ಮಕ್ಕಳ ಸಹಾಯವಾಣಿ ೧೦೯೮, ಮಹಿಳಾ ಸಹಾಯವಾಣಿ ೧೮೧ರ ಸಹಕಾರದೊಂದಿಗೆ ಇಲಾಖೆಯನ್ನು ಮಹಿಳೆಯರು ಮತ್ತು ಮಕ್ಕಳು ದಿನದ ೨೪ ಗಂಟೆಗಳು ವಾರದ ಏಳು ದಿನಗಳು ಉಚಿತವಾಗಿ ಸಂಪರ್ಕಿಸಬಹುದಾಗಿ ತಿಳಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನೀಡುವ ಯೋಜನೆಯಾದ ಉದ್ಯೋಗಿನಿ ಯೋಜನೆಯು ಮಹಿಳೆಯರ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದ್ದು ೧೮ ರಿಂದ ೫೫ ವರ್ಷದ ಒಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಸಬಹುದು ಎಂದು ತಿಳಿಸಿದರು ಮೇಲ್ವಿಚಾರಕರು ಪ್ರಬಾರ ಸಾಹಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಬಿಪಿಎಲ್ ಕುಟುಂಬಕ್ಕೆ ಸೇರಿದ ೨ ಹೆಣ್ಣು ಮಕ್ಕಳ ಜನನವಾಗಿ ಎರಡು ವರ್ಷದೊಳಗೆ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆಯ ಸೌಲಭ್ಯವನ್ನು ಪಡೆಯಬಹುದಾಗಿ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಸರ್ಕಾರಿ ನೌಕರಳಲ್ಲದ ಮೊದಲ ಪ್ರಸವದ ಗರ್ಭಿಣಿ ಮಹಿಳೆಯರಿಗೆ ಎರಡು ಕಂತುಗಳಲ್ಲಿ ೫೦೦೦ ಸಹಾಯಧನ ಹಾಗೂ ಎರಡನೇ ಪ್ರಸವದ ಬಾಣಂತಿ ಮಹಿಳೆಯರಿಗೆ ಹೆಣ್ಣು ಮಗು ಜನಿಸಿದರೆ ಡಿಬಿಟಿ ಮೂಲಕ ಒಂದೇ ಕಂತಿನಲ್ಲಿ ೬೦೦೦ ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದರು.
ಸ್ತಿçà ಶಕ್ತಿ ಗುಂಪಿನ ಮಹಿಳೆಯರಿಗೆ ಉಳಿತಾಯವನ್ನು ಹೆಚ್ಚಿಸಲು ಆದಾಯ ಉತ್ಪನ್ನವನ್ನ ಚಟುವಟಿಕೆಯನ್ನು ಮಾಡಲು ಪ್ರೋತ್ಸಾಹಿಸಿದರು. ಬಾಲ್ಯ ವಿವಾಹದ ದುಷ್ಪರಿಣಾಮದ ಬಗ್ಗೆ ಹಾಗೂ ತೂಕದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಅಂಗನವಾಡಿಗಳಿAದ ಸೂಕ್ತ ಸಮಯದಲ್ಲಿ ಫಲಾನುಭವಿಗಳಿಗೆ ಸರಿಯಾಗಿ ಆಹಾರ ವಿತರಣೆ ಆಗುತ್ತಿರುವ ಬಗ್ಗೆ ಕೂಲಿ ಕಾರ್ಮಿಕರ ವಾಸಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.